Sunday, March 3, 2024

Latest Posts

ರಜತ್ ಗೆ ಟಿಕೇಟ್ ನೀಡುವಂತೆ ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರಿಂದ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

- Advertisement -

Political News: ಹುಬ್ಬಳ್ಳಿ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠಗೆ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಮುಖಂಡರು, ಹಾಗೂ ವಿದ್ಯಾನಗರ – ಉಣಕಲ್ – ನವನಗರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು, ಇಂದು ಲೋಕೋಪಯೋಗಿ ಸಚಿವರು ಹಾಗೂ ಕೆಪಿಸಿಸಿ ಕಾರ್ಯದ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರನ್ನು ಹುಬ್ಬಳ್ಳಿಯಲ್ಲಿ ಸ್ವಾಗತಿಸಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನ್ನು ಯುವ ನಾಯಕ ರಜತ್ ಉಳ್ಳಾಗಡ್ಡಿ ಮಠ ಅವರಿಗೆ ನೀಡಬೇಕು ಎಂದು ಮನವಿ ಸಲ್ಲಿಸಿದರು.

ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿ,ವರಿಷ್ಠರ ಮಾತಿಗೆ ಗೌರವ ನೀಡಿ ಟಿಕೆಟ್ ತ್ಯಾಗ ಮಾಡಿದ್ದರು. ಇನ್ನೂ ಮುಂದುವರೆದು ಇಂದಿಗೂ ಪಕ್ಷ ನಿಷ್ಠೆ ತೋರುತ್ತಾ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಉತ್ಸಾಹದಲ್ಲಿರುವ ಸಾಮಾನ್ಯ ಕಾರ್ಯಕರ್ತ ನಂತೆ ಇರುವ ನಾಯಕ ರಜತ್ ಉಳ್ಳಾಗಡ್ಡಿ ಮಠ ಇವರಿಗೆ ಟಿಕೆಟ್ ನೀಡಬೇಕು ಎಂದು ಮನವಿ ಸಲ್ಲಿಸಲಾಗಿದೆ.

ಕಾಂಗ್ರೆಸ್ ಮುಖಂಡರಾದ ಸುನಿಲ್ ಮಠಪತಿ, ವೀರೇಶ್ ಕಡಕೋಳಮಠ, ರಘುವೀರ್,ಸಾಧಿಕ್ ಯಕ್ಕಂಡಿ,ಕಿರಣ್ ಗಾಂದಲ್, ಸೈಪ್ ಯರಗಟ್ಟಿ,ಹಾಗೂ ಮೌಲಸಾಬ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.

ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಕಳಪೆ ಪ್ರದರ್ಶನ: ಸಚಿವರ ಅಸಮಾಧಾನ

ಅಧಿಕಾರಿ ವಿರುದ್ಧ ಗರಂ ಆದ ಸಂಸದ ವೈ.ದೇವೇಂದ್ರಪ್ಪ

ಹಿರಿಯ ನಟಿ ಲೀಲಾವತಿ ನಿರ್ಮಾಣದ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

- Advertisement -

Latest Posts

Don't Miss