Monday, September 9, 2024

Latest Posts

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಾಗುತ್ತಾ?- ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರಾ?

- Advertisement -

ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್​ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ.
vo: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ್.. ಹೀಗೆ ಒಂದೊಂದೇ ಹೆಸರುಗಳು ಸಿಎಂ ಸ್ಥಾನಕ್ಕೆ ಕೇಳಿಬರುತ್ತಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನಕ್ಕೆ ಫೇವರಿಟ್ ಆಗಿದ್ದರೂ, ಹಿಂದುಳಿದ ಸಮುದಾಯಗಳನ್ನು ಒಗ್ಗೂಡಿಸಲು ಹಿಂದುಳಿದ ವರ್ಗಗಳ ನಾಯಕರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ಹೈಕಮಾಂಡ್ ಪರಿಶೀಲಿಸುತ್ತಿದೆ. ಹೀಗಾಗಿ, ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಹೆಚ್ಚು ಮುಂಚೂಣಿಯಲ್ಲಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಬೆನ್ನಿಗೆ ಪಕ್ಷದ ಒಂದು ವರ್ಗದ ಮುಖಂಡರು ಸಮ್ಮತಿ ಸೂಚಿಸಿದ್ದರೇ, ಮತ್ತೊಂದು ವರ್ಗವು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಜನಪ್ರಿಯತೆಯತ್ತ ಒಲವು ತೋರುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸದ್ದಿಲ್ಲದೇ ಹೈಕಮಾಂಡ್ ನಾಯಕರ ಭೇಟಿಯಾದ ಸತೀಶ್!
ಸಿದ್ದರಾಮಯ್ಯ ಅವರ ನಂತರ ದಲಿತ ವರ್ಗಗಳ ಪ್ರಬಲ ನಾಯಕನಾಗಿ ಸತೀಶ್ ಜಾರಕಿಹೊಳಿ ಗುರುತಿಸಿಕೊಂಡಿದ್ದಾರೆ. ಎಸ್​ಸಿ- ಎಸ್​ಟಿ ಸಮುದಾಯದ 15 ಶಾಸಕರು ಸೇರಿದಂತೆ 30 ಕ್ಕೂ ಹೆಚ್ಚು ಶಾಸಕರ ಬೆಂಬಲವು ಸತೀಶ್ ಜಾರಕಿಹೊಳಿ ಪರವಾಗಿದೆ. ಈ ಬಾರಿ ಅವರಿಗೆ ಅವಕಾಶ ನೀಡಲು ಪಕ್ಷವು ಗಂಭೀರ ಚಿಂತನೆ ನಡೆಸುತ್ತಿದೆ ಎಂಬ ಊಹಾಪೋಹಗಳೂ ಕೇಳಿಬಂದಿವೆ. ಇದರ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಅವರು ಇತ್ತೀಚಿಗೆ ನವದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಇದು ಸತೀಶ್ ಮುಂದಿನ ಸಿಎಂ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ.


ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡವರು. ಕಲ್ಯಾಣ ಕರ್ನಾಟಕ- ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಹಿಡಿತವನ್ನು ಹೊಂದಿದ್ದಾರೆ. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲೂ ಸತೀಶ್ ತಮ್ಮ ಪುತ್ರಿ ಪ್ರಿಯಾಂಕಾ ಅವರನ್ನು ಗೆಲ್ಲಿಸಿಕೊಂಡು ಬಂದ್ದಿದ್ದಾರೆ. ಹೀಗಾಗಿ, ಒಂದು ವೇಳೆ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದ್ರೆ, ಸತೀಶ್ ಮುಂದಿನ ಸಿಎಂ ಆಗಬಹುದು ಎಂದು ರಾಜಕೀಯ ಲೆಕ್ಕಾಚಾರವಾಗಿದೆ.
ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ ಎಂದ ರಾಜಣ್ಣ
ಇತ್ತೀಚಿಗೆ ಸಿಎಂ ಸ್ಥಾನದ ಕುರಿತು ಮಾತನಾಡಿದ್ದ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೀನಿ ಎಂದಿದ್ರು. ಈ ಹೇಳಿಕೆ ಕಾಂಗ್ರೆಸ್​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಈ ಕುರಿತು ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಆಗಬೇಕೆಂದು ಶಾಸಕ ದೇಶಪಾಂಡೆ ಒಬ್ಬರೇ ಅಲ್ಲ ದೊಡ್ಡಪಟ್ಟಿಯೇ ಇದೆ. ಸಿಎಂ ಕುರ್ಚಿ ಖಾಲಿ ಇದ್ದರೆ ಕೇಳಬೇಕು. ಸಿಎಂ ಕುರ್ಚಿ ಇರೋದು ಒಂದೇ ಅದು ಭರ್ತಿಯಾಗಿದೆ. ಬಹಳಷ್ಟು ಕುರ್ಚಿಗಳಿದ್ದರೆ ಕೇಳಬಹುದಿತ್ತು ಎಂದು ವ್ಯಂಗ್ಯವಾಡಿದ್ದಾರೆ.

- Advertisement -

Latest Posts

Don't Miss