Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಪ್ರದಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂನ್.4 ಕ್ಕೆ ನಾವು ಕಾಯುತ್ತಿದ್ದೇವೆ, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾಗಾಂಧಿ ಕೂತಿದ್ದ ಸೀಟಲ್ಲಿ ಬಂದು ಕೂತುಬಿಟ್ಟ ಎಂದು ಶ್ರೀನಿವಾಸಪುರದ ವಳಗೇರನಹಳ್ಳಿ ಬಳಿ ಪ್ರಚಾರದ ವೇಳೆ ಮೋದಿ ವಿರುದ್ದ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಎಲ್ಲಾ ಜಾತಿ ಜನಾಂಗದವರಿಗೆ ಆತ್ಮಸ್ಥೈರ್ಯ ತುಂಬಿದ್ದರು ಇಂದಿರಾ ಗಾಂಧಿ. ಎಂತಹವರ ಜಾಗಕ್ಕೆ ಎಂತಹವನು ಬಂದು ಕೂತಿದ್ದಾನೆ. ಸಂತೆಯಲ್ಲಿ ಹಾವಾಡಿಗ ಸುಳ್ಳು ಹೇಳೊದು ಕೇಳಿದ್ದೆವೆ. ಪ್ರಧಾನಿ ಸುಳ್ಳು ಹೇಳೊದು ಈ ಪ್ರಪಂಚದಲ್ಲಿಯೇ ಕೇಳಿರಲಿಲ್ಲ. ರಾಜ್ಯದಲ್ಲಿ ಕಾಂಗ್ರೇಸ್ ಹೆಚ್ಚಿನ ಸ್ಥಾನ ಬರುತ್ತೆ ಗೌತಮ್ ಗೆದ್ದೆ ಗೆಲ್ಲುತ್ತಾನೆ ಎಂದು ರಮೇಶ್ ಕುಮಾರ್ ಹೇಳಿದರು.
ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು: ಚಕ್ರವರ್ತಿ ಸೂಲಿಬೆಲೆ
ಲವ್ ಜಿಹಾದ್‌ಗೆ ದೇಶದಲ್ಲಿ ತರಬೇತಿ ಕೇಂದ್ರವಿರಬೇಕು ಅನಿಸುತ್ತಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ