ಹಾವೇರಿ:ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಾಂಪ್ರದಾಯಿಕ ವೃತ್ತಿದಾರರ ಸಾಲ ಹಾಗೂ ಸ್ವಯಂ ಉದ್ಯೋಗ ಸಾಲ ಸೌಲಭ್ಯ ಪಡೆಯಲು ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯಾ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ, ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ, ಕ್ಷತ್ರಿ, ನಾಡಿಗ್, ಕ್ಷೌರಿಕ್ ಜನಾಂಗಕ್ಕೆ ಸೇರಿದವರಾಗಿರಬೇಕು. 18 ರಿಂದ 55 ವರ್ಷದೊಳಗಿರಬೇಕು.
ಆಸಕ್ತರು www.suvidha.karnataka.gov.in ಜಾಲತಾಣದಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗದಮ ವೆಬ್ಸೈಟ್ www.kmmd.karnataka.gov.in ಸಂಪರ್ಕಿಸಲು ಕೋರಲಾಗಿದೆ. ಆನ್ಲೈನ್ ಮೂಲಕ ಭರ್ತಿಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಯೊಂದಿಗೆ ದಿನಾಂಕ 03-08-2022ರೊಳಗಾಗಿ ಸುವಿಧಾ ತಂತ್ರಾಂಶದ ಮೂಲಕಸಲ್ಲಿಸಬೇಕು ಎಂದು ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




