- Advertisement -
State news:
ಜಿಲ್ಲಾಡಳಿತದ ವತಿಯಿಂದ ಫೆ.1 ರಂದು ಮಡಿವಾಳ ಮಾಚಿದೇವ ಜಯಂತಿ ಹಾಗೂ ಫೆ.7 ರಂದು ಸವಿತಾ ಮಹರ್ಷಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಪೂರ್ವ ಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎರಡು ಜಯಂತಿಗಳು ಯಾವುದೇ ಲೋಪಗಳು ಇಲ್ಲದೆ ನಿಗದಿಪಡಿಸಿರುವ ದಿನಾಂಕದಂದು ಬೆಳಿಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ನಡೆಯಬೇಕು ಎಂದರು.ಮಡಿವಾಳ ಮಾಚಿದೇವ ಜಯಂತಿಯ ಬಗ್ಗೆ ಮಂಡ್ಯ ಉಪವಿಭಾಗಧಿಕಾರಿ ಹೆಚ್ ಎಸ್ ಕೀರ್ತನ ಅವರು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನ ಗೌರವಿಸಲಾಗುವುದು ಎಂದು ತಿಳಿಸಿದರು.ಸಭೆಯಲ್ಲಿ ಕನ್ನಡ ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕ ಎನ್ ಉದಯಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.
- Advertisement -