National news :
ಕಾನೂನಿನಲ್ಲಿ ಸೂಕ್ತ ಪರಿಹಾರಗಳನ್ನು ಪಡೆಯಲು ಎಲ್ಲಾ ಅರ್ಜಿಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಪೀಠವು ಆದೇಶಿಸಿದೆ.ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸುವ ಬಿಹಾರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ವಿಚಾರಣೆಗೆ ಸಲ್ಲಿಸಿದ್ದ ಅರ್ಜಿಗಳನ್ನ ಸಾರಾಸಗಟಾಗಿ ತಿರಸ್ಕರಿಸಿದೆ. ಇದೊಂದು ಪ್ರಚಾರ ಹಿತಾಸಕ್ತಿ ಮೊಕದ್ದಮೆ. ಜಾತಿಗಳಿಗೆ ಎಷ್ಟು ಮೀಸಲಾತಿ ನೀಡಬೇಕು ಎಂಬುದರ ಕುರಿತು ನಾವು ಹೇಗೆ ನಿರ್ದೇಶನಗಳನ್ನು ನೀಡಬೇಕಾಗುತ್ತದೆ.. ನಾವು ಇಂತಹ ನಿರ್ದೇಶನಗಳನ್ನು ನೀಡಲು ಎಂದಿಗೂ ಸಾಧ್ಯವಿಲ್ಲ ಮತ್ತು ಈ ಅರ್ಜಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ” ಎಂದು ಪೀಠವು ವಕೀಲರಿಗೆ ತಿಳಿಸಿದೆ. ಕಾನೂನಿನಲ್ಲಿ ಸೂಕ್ತ ಪರಿಹಾರಗಳನ್ನು ಪಡೆಯಲು ಎಲ್ಲಾ ಅರ್ಜಿಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಪೀಠವು ಆದೇಶಿಸಿದೆ.