Sunday, September 8, 2024

Latest Posts

Manglore: ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ: ಶಾಲಾ ಕಾಲೇಜುಗಳಿಗೆ ರಜೆ

- Advertisement -

ಮಂಗಳೂರು: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಹಿತ ಸಮಸ್ಯೆಗಳು ತಲೆದೋರಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಗುರುವಾರ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಅದರಂತೆ ಇಂದು ಶಾಲೆಗಳು ಬಂದ್ ಆಗಿದ್ದವು. ಮುಂಗಾರು ಆಗಮನದ ನಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಮುಚ್ಚುವುದಲ್ಲದೆ ಜಿಲ್ಲಾಡಳಿತ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಭೂಕುಸಿತಕ್ಕೆ ಒಳಗಾಗುವ ಹಲವಾರು ಪ್ರದೇಶಗಳನ್ನು ಗುರುತಿಸಲಾಗಿದೆ ಮತ್ತು ಅಪಾಯಗಳನ್ನು ತಗ್ಗಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಕುಮಾರದಾರಾ ಸಹಿತ ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿ ನೇತ್ರಾವತಿ ನದಿಯ ಮಟ್ಟವೂ ಜಾಸ್ತಿಯಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಸಮುದ್ರ ತೀರ ಅಥವಾ ನದಿ ದಡಕ್ಕೆ ಮತ್ತು ವಿದ್ಯುತ್ ಕಂಬ,ತಂತಿ ಬಳಿ ಹೋಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಅನುಲಕ್ಷಿಸಿ ಮತ್ತಷ್ಟು ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಅಪಾಯಕಾರಿ ಸನ್ನಿವೇಶಗಳಿಂದ ದೂರವಿರಿ ಎಂದು ಪದೇ ಪದೇ ಜಿಲ್ಲಾಧಿಕಾರಿ ಕಚೇರಿಯಿಂದ ಸೂಚನೆಗಳನ್ನು ನೀಡಲಾಗುತ್ತಿದೆ. ಈ ಸಂದರ್ಭ ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಹಸೀಲ್ದಾರ್ ಸಹಿತ ಪ್ರತಿಯೊಂದು ತಾಲೂಕುಗಳಲ್ಲೂ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
IMD ಯಿಂದ ಇತ್ತೀಚಿನ ಅಪ್‌ಡೇಟ್‌ಗಳ ಪ್ರಕಾರ, 35 kmph ನಿಂದ 45 kmph ವೇಗದ ಗಾಳಿಯೊಂದಿಗೆ 55 kmph ವರೆಗೆ ಗಾಳಿ ಬೀಸುವ ವಾತಾವರಣವು ಕರ್ನಾಟಕ ಕರಾವಳಿಯಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ IMD ರೆಡ್ ಅಲರ್ಟ್ ಘೋಷಿಸಿದೆ.ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಗುರುವಾರ ಕರಾವಳಿ ಕರ್ನಾಟಕದಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಜೂನ್ 28 ರಿಂದ ಜೂನ್ 30 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

 

- Advertisement -

Latest Posts

Don't Miss