- Advertisement -
Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ.
ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.
ಬೆಂಗಳುರು ಸಂಪೂರ್ಣ ಸ್ತಬ್ಧವಾಗುವುದರಿಂದ ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Films ban: ಕಾವೇರಿ ಹೋರಾಟಕ್ಕೆ ಭಾಗಿಯಾಗದ ನಟರ ಸಿನಿಮಾ ಬಹಿಷ್ಕರಿಸಿ: ಯತ್ನಾಳ್
- Advertisement -