- Advertisement -
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ.
‘ಕೆಂಭಾವಿ–ಟಾಟಾ ರಸ್ತೆ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳು ಆಗಿದ್ದು, ಅವರನ್ನು ತಕ್ಷಣವೇ ಸುರಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದ ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅಪಘಾತದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳೀಯ ಪೊಲೀಸರು ಘಟನೆ ಬಗ್ಗೆ ಪರಿಶೀಲನೆ ಆರಂಭಿಸಿದ್ದಾರೆ.
- Advertisement -

