Wednesday, July 2, 2025

Latest Posts

ಮಳೆ, ಶೀತಗಾಳಿ ಕಾರಣ ಶಾಲಾ ಕಾಲೇಜುಗಳಿಗೆ ಜು.25, 26 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ

- Advertisement -

Dharwad News: ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.

- Advertisement -

Latest Posts

Don't Miss