ಶಿವಮೊಗ್ಗ: ನಗರದಲ್ಲಿ ಸೆಕ್ಶನ್ 144 ಜಾರಿಯಾದ ಹಿನ್ನೆಲೆಯಲ್ಲಿ ಇಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣದ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾಹಿತಿ ಬಿಡುಗಡೆ ಮಾಡಿದ್ದು, 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ದಿನಾಂಕ 16/08/2022 ರಂದು ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.




