Wednesday, February 5, 2025

Latest Posts

ಶಾಲೆಗಳ ಆರಂಭಕ್ಕೆ ತಿರ್ಮಾನ..!

- Advertisement -

www.karnatakatv.net :ಬೆಂಗಳೂರು : ದಸರಾ ರಜೆಯ ಬಳಿಕ ಶಾಲೆಗಳನ್ನು ಪ್ರಾರಂಭಿಸಲು ಸುಳಿವು ಕೊಟ್ಟಿದ್ದರು ಆದರೆ ಈಗ ಇದರ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು   ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಯೋಚಿಸಿ ಪ್ರಾರಂಭಿಸಲು ಹಿಂದೇಟು ಮಾಡುತ್ತಿದ್ದಾರೆ. ಇದೀಗ  ಮಕ್ಕಳ ಭವಿಷ್ಯದ ಬಗ್ಗೆ ತಿರ್ಮಾನಿಸಿ ಶಾಲೆಗಳನ್ನು ಪುನರಾರಂಭಿಸಲು  ನಿರ್ಧರಿಸಲಾಗಿದೆ. ಈ ಬಗ್ಗೆ ತಜ್ಞರ ಜೊತೆ ಸಭೆ ನಡೆಸಿ ಅವರ ಅಭಿಪ್ರಾಯವನ್ನೂ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡಿದರು.

ದಸರಾ ನಂತರ ಸಾಂಕ್ರಾಮಿಕ ರೋಗವು ನಿಯಂತ್ರಣಕ್ಕೆ ಬಂದರೆ ಶಾಲೆಗಳನ್ನು ಪುನರಾರಂಭಿಸುವದಾಗಿ ತಿಳಿಸಿದ್ದಾರೆ. ಆಗ ಪೋಷಕರೂ ಸಹ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಹುದು ಎಂದು ಹೇಳಿದರು. ಆಂಧ್ರಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳು ಪ್ರಾರಂಭವಾಗುತ್ತಿವೆ. ಕೇರಳದಲ್ಲಿ ನ.1ರಿಂದ ಪ್ರಾರಂಭ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಘೋಷಿಸಿದೆ. ಹೀಗಾಗಿ ರಾಜ್ಯದಲ್ಲಿಯೂ ಪ್ರಾಥಮಿಕ ಶಾಲೆಯ ಪ್ರಾರಂಭದ ಅಗತ್ಯತೆಯ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಗೆ ತಿಳಿಸಲಾಗುವುದು. ಅವರ ಅಭಿಪ್ರಾಯ ಪಡೆದೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.ಒಂದು ವೇಳೆ ಒಂದನೇ ತರಗತಿಯಿಂದ ಪ್ರಾರಂಭಿಸಲು ಅನುಮತಿ ಸಿಗದಿದ್ದರೆ, ಕನಿಷ್ಟ ಬಳಿಕ  3ರಿಂದ5ನೇ ತರಗತಿವರೆಗೆ ಆದರು  ಅನುಮತಿ ನೀಡಿ ಎಂದು ಮನವಿ ಮಾಡಲಾಗಿದೆ. ಇನ್ನೂ ಕೆಲ ಸಮಯ ಕಳೆದ ಬಳಿಕ ಎಲ್ಲ ತರಗತಿಗಳನ್ನು ಪ್ರಾರಂಭಿಸುವುದಾಗಿ ಸಚಿವರು ತಿಳಿಸಿದ್ದಾರೆ.

ಕರ್ನಾಟಕ ಟಿವಿ- ಬೆಂಗಳೂರು

- Advertisement -

Latest Posts

Don't Miss