Wednesday, August 20, 2025

Latest Posts

ದ್ವಿತೀಯ ಪಿಯುಸಿ ಫಲಿತಾಂಶ: ಪಾಸ್ ಆದ ವಿದ್ಯಾರ್ಥಿಗಳಿಗೆ ಅಭಿನಂದಿಸಿ, ಫೇಲ್ ಆದವರಿಗೆ ಧೈರ್ಯ ಹೇಳಿದ ಸಿಎಂ

- Advertisement -

Political News: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿದೆ. ಎಂದಿನಂತೆ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಂಭ್ರಮದಲ್ಲಿದ್ದರೆ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಬೇಸರದಲ್ಲಿದ್ದಾರೆ. ಹೀಗಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಹಾರೈಸುತ್ತೇನೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು ದೊಡ್ಡದು, ಮತ್ತೆ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಪಾಸಾಗುವ ಅವಕಾಶ ಖಂಡಿತಾ ಸಿಗಲಿದೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ.

ವಿವಿಧ ವಿಭಾಗಗಳಲ್ಲಿ ರ‌್ಯಾಂಕ್ ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣುಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ವಿಶ್ ಮಾಡಿದ್ದಾರೆ.

- Advertisement -

Latest Posts

Don't Miss