Sunday, December 22, 2024

Latest Posts

Hijab Controversy ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ..!

- Advertisement -

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದು ತಾರಕಕ್ಕೇರಿದೆ. ಶಿವಮೊಗ್ಗದ (Shivamogga) ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಹಾಗೂ ನೀಲಿ ಶಾಲನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಾ ಏಕಾಏಕಿ ಕಾಲೇಜಿನ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ ವಿದ್ಯಾರ್ಥಿಗಳನ್ನು ಚದುರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಹಿಜಾಬ್ ಜಿಂದಾ ಬಾದ್, ಜೈ ಭೀಮ್, ಜೈ ಶ್ರೀ ರಾಮ್ (Jai Shri Ram) ಎಂದು ಕೂಗುತ್ತಾ ಪ್ರತಿಭಟನೆ ನಡೆಸಿದ್ದು, ವಿದ್ಯಾರ್ಥಿಗಳು ಕಲ್ಲು ತೂರಾಟ (Students throw stones) ವನ್ನು ಸಹ ನಡೆಸಿದ್ದಾರೆ. ಇದೇ ವೇಳೆ ಕಾಲೇಜಿನ ಆವರಣದಲ್ಲಿರುವ ಧ್ವಜ ಕಂಬಕ್ಕೆ ಕೇಸರಿ ದ್ವಜ ಹಾರಿಸಲು ಯತ್ನಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯ ವೇಳೆ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದೆ. ಈ ಕಾರಣಕ್ಕಾಗಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ತಸಿಲ್ದಾರ್ ನಾಗರಾಜ್ (Tasildar Nagaraj) 144 ಸೆಕ್ಷನ್ ಜಾರಿ (144 Section enforcement) ಮಾಡಿ, ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಸೆಕ್ಷನ್ 144 ಇಂದು ಮತ್ತು ನಾಳೆ ಜಾರಿಯಲ್ಲಿರುತ್ತದೆ. ಇನ್ನು ಸಿಂಧನೂರು ಪೋಲಿಸರು (Sindanur police) ರಸ್ತೆ ತಡೆದು, ಕಲ್ಲು ತೂರಾಟ ನಡೆಸಿದ್ದಕ್ಕೆ 18 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Latest Posts

Don't Miss