- Advertisement -
www.karnatakatv.net : ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ. ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದವರಾಗಿದ್ದಾರೆ.
ಅಗಸ್ಟ್ 2 ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ, ಗುತ್ತಿಗೆ ಆಧಾರದ ಮೇಲೆ ಗುರುಲಿಂಗಸ್ವಾಮಿ ಅವರನ್ನು ಮುಖ್ಯ ಮಂತ್ರಿಗಳ ಮಾಧ್ಯಮ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
- Advertisement -