Sunday, September 8, 2024

Latest Posts

Poet ಡಾ ಚೆನ್ನವೀರ ಕಣವಿ ಇನ್ನಿಲ್ಲ..!

- Advertisement -

ಧಾರವಾಡ : ಕನ್ನಡದ ಖ್ಯಾತ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ (Chennaveera Kanavi) ಅವರು ನಿಧನರಾಗಿದ್ದು, ಅವರಿಗೆ 93 ವರ್ಷ ವಯಸ್ಸಾಗಿತ್ತು.ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಣವಿ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ (Sdm Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿಯವರು ಜನಿಸಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಭಾವಜೀವಿ, ಸಮನ್ವಯ ಕವಿ ಎಂದೇ ಅವರು ಖ್ಯಾತಿಗಳಿಸಿದ್ದರು. 1949ರಲ್ಲಿ ಡಾ. ಚನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ ಬಿಡುಗಡೆಗೊಂಡಿತು. ಭಾವಜೀವಿ , ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ, ದಾರಿ ದೀಪ ,ನೆಲ ಮುಗಿಲು, ಎರಡು ದಡ, ನಗರದಲ್ಲಿ ನೆರಳು, ಜೀವಧ್ವನಿ, ಕಾರ್ತೀಕದ ಮೋಡ, ಜೀನಿಯಾ, ಹೊಂಬೆಳಕು, ಶಿಶಿರದಲ್ಲಿ ಬಂದ ಸ್ನೇಹಿತ, ಚಿರಂತನ ದಾಹ , ಹೂವು ಹೊರಳುವವು ಸೂರ್ಯನ ಕಡೆಗೆ, ಎಂಬ ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ. ಕನ್ನಡದ ಕಾಲು ಶತಮಾನ, ಸಿದ್ಧಿ ವಿನಾಯಕ ಮೋದಕ, ಕವಿತೆಗಳು, ನವಿಲೂರು ಮನೆಯಿಂದ, ನವ್ಯಧ್ವನಿ, ನೈವೇದ್ಯ, ನಮ್ಮೆಲ್ಲರ ನೆಹರೂ, ಜೀವನ ಸಿದ್ಧಿ, ಆಧುನಿಕ ಕನ್ನಡ ಕಾವ್ಯ, Modern Kannada Poetry, ಸುವರ್ಣ ಸಂಪುಟ, ರತ್ನ ಸಂಪುಟ, ಬಾಬಾ ಫರೀದ ಇವರ ಸಂಪಾದನೆ. ಸಾಹಿತ್ಯಚಿಂತನ, ಕಾವ್ಯಾನುಸಂಧಾನ, ಸಮಾಹಿತ ,ಮಧುರಚೆನ್ನ, ಇವರ ಸಮತೋಲನ ವಿಮರ್ಶಾಲೇಖನಗಳು ಹಾಗು ಪ್ರಬಂಧ ಸಂಕಲನಗಳು. 1996ರಲ್ಲಿ ಹಾಸನದಲ್ಲಿ ನಡೆದ 65 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಣವಿಯವರು ಅಧ್ಯಕ್ಷರಾಗಿದ್ದರು. ಆಳ್ವಾಸ್ -ನುಡಿಸಿರಿ 2008 “ರ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ, ‘ನಾಡೋಜ ಮತ್ತು ಪಂಪ ಪ್ರಶಸ್ತಿ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಅನಕೃ ನಿರ್ಮಾಣ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಕಣವಿಯವರ ಸಾಧನೆಗೆ ಸಿಕ್ಕ ಗೌರವಗಳು.

- Advertisement -

Latest Posts

Don't Miss