- Advertisement -
ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೆ ಡಿಕೆಶಿಗೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮ ಹೆಸರನ್ನು ಬಿಡುವಂತೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಸಚಿವ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ನಡೆದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಪ್ರಕರಣದಲ್ಲಿ ತಮ್ಮ ಹೆಸರು ಕೈಬಿಡುವಂತೆ ಸಚಿವ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರೋ ನ್ಯಾಯಾಲಯ, ಪ್ರಕರಣದಿಂದ ಡಿಕೆಶಿ ಹೆಸರನ್ನು ಕೈಬಿಡಲು ಒಪ್ಪಿಗೆ ನೀಡಿಲ್ಲ. ಹೀಗಾಗಿ ಪ್ರಕರಣ ಮುಂದುವರಿಯಲಿದ್ದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ತೀವ್ರ ಹಿನ್ನಡೆಯಾಗಿದೆ.
ಇನ್ಮುಂದೆ ಡಬಲ್ ಆಗಲಿದೆ ರೈತರ ಆದಾಯ…!! ಮಿಸ್ ಮಾಡದೇ ಈ ವಿಡಿಯೋ ನೋಡಿ
- Advertisement -