Thursday, October 10, 2024

Latest Posts

ನಾಳೆ ರಾಜ್ಯದ 8 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಬಂದ್..!!

- Advertisement -

ಬೆಂಗಳೂರು: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ನಾಳೆ ರೈತರು ಬೃಹತ್ ಸಂಖ್ಯೆಯಲ್ಲಿ ರಸ್ತೆಗಿಳಿಯಲಿದ್ದಾರೆ. ಅಲ್ಲದೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡೋ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.

2013ರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸುತ್ತಲೇ ಬಂದಿರೋ ರೈತರ ಆಕ್ರೋಶದ ಕಟ್ಟೆಯೊಡೆದಿದೆ. ಹೀಗಾಗಿ ಸರ್ಕಾರಕ್ಕೆ ಚುರುಕುಮುಟ್ಟಿಸೋ ಸಲುವಾಗಿ ನಾಳೆ ರಾಜ್ಯಾದ್ಯಂತ ರೈತರು ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಲಿದ್ದು, ರಾಜ್ಯದ 8 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ನಾಳೆ ದೂರದೂರುಗಳಿಗೆ ಪ್ರಯಾಣ ಮಾಡುವವರು ಎಚ್ಚರ ವಹಿಸಬೇಕಿದೆ. ತುರ್ತು ಕೆಲಸ ನಿಮಿತ್ತ ಬೇರೆ ಸ್ಥಳಗಳಿಗೆ ಪ್ರಯಾಣ ಬೆಳೆಸುವವರಿಗೂ ತೊಂದರೆ ತಪ್ಪಿದ್ದಲ್ಲ.

ಇನ್ನು 2013ರಲ್ಲಿ ಭೂಸ್ವಾಧೀನ ಕಾಯ್ದೆ ಜಾರಿಗೆ ತಂದಿತ್ತು. ಈ ಕಾಯ್ದೆ ಅನುಸಾರ, ಜಮೀನು ಪಡೆಯೋ ಸಂದರ್ಭದಲ್ಲಿ ರೈತರ ಒಪ್ಪಿಗೆ ಪಡೆದು ಭೂಸ್ವಾಧೀನಪಡಿಸಿಕೊಳ್ಳಬೇಕು. ರೈತರಿಗೆ ನೀಡಿದ ಹಣ ತೃಪ್ತಿದಾಯಕವಾಗಿರಬೇಕು. ಇಲ್ಲದಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗುವ ಅವಕಾಶವಿದೆ ಅನ್ನೋ ಅಂಶವನ್ನು ಈ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿತ್ತು. ಆದ್ರೆ ಇದೀಗ ಸರ್ಕಾರ ಈ ಕಾಯ್ದೆಯನ್ನು ಬದಲಿಸಿದ್ದೇ ರೈತರ ಆಕ್ರೋಶಕ್ಕೆ ಕಾರಣವಾಗಿ ಪರಿಣಾಮ ನಾಳೆ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಲಿವೆ.

ಹೆದ್ದಾರಿಗಳು ಬಂದ್ ಆಗೋ ಬಗ್ಗೆ ಈ ವಿಡಿಯೋದಲ್ಲಿದೆ ಕಂಪ್ಲೀಟ್ ಡೀಟೇಲ್ಸ್.. ! ಮಿಸ್ ಮಾಡದೇ ನೋಡಿ

https://www.youtube.com/watch?v=9QC_Zws_Jtw
- Advertisement -

Latest Posts

Don't Miss