Monday, December 23, 2024

Latest Posts

ಶಿರಡಿ ಸಾಯಿಬಾಬಾ ದೇಗುಲಕ್ಕೆ ಶಾರುಖ್ ಖಾನ್ ಭೇಟಿ!

- Advertisement -

National News: ಮಹಾರಾಷ್ಟ್ರ: ತಮ್ಮ ನಟನೆಯ ‘ಡಂಕಿ’ ಸಿನಿಮಾದ ಬಿಡುಗಡೆಗೂ ಮುನ್ನ, ಬಾಲಿವುಡ್‌ನ ಖ್ಯಾತ ನಟ ಶಾರುಕ್ ಖಾನ್ ತಮ್ಮ ಪುತ್ರಿ ಸುಹಾನಾ ಖಾನ್ ಅವರೊಂದಿಗೆ ಶಿರಡಿಯ ಸಾಯಿಬಾಬಾ ಸಮಾಧಿ ದೇಗುಲಕ್ಕೆ ಭೇಟಿ ನೀಡಿದರು.

ಶಾರುಕ್ ಖಾನ್ ಅವರ ಭೇಟಿ ವೇಳೆ ದೇಗುಲದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಶಾರೂಕ್ ಜತೆಗೆ ಅವರ ವ್ಯವಸ್ಥಾಪಕಿ ಪೂಜಾ ದದ್ದಾನಿ ಕೂಡ ಇದ್ದರು. ಎರಡು ದಿನಗಳ ಹಿಂದಷ್ಟೇ ಜಮ್ಮುವಿನ ರೆಯಾಸಿ ಜಿಲ್ಲೆಯಲ್ಲಿರುವ ವೈಷ್ಟೋದೇವಿ ದೇಗುಲಕ್ಕೂ ಶಾರುಕ್ ಭೇಟಿ ನೀಡಿದ್ದರು. ಜವಾನ್ ಚಿತ್ರ ಬಿಡುಗಡೆ ಸಂದರ್ಭದಲ್ಲಿ ಅವರು ತಿರುಪತಿಗೆ ಭೇಟಿ ನೀಡಿದ್ದರು. ಶಾರುಕ್ ಅಭಿನಯದ ‘ಡುಂಕಿ’ ಚಿತ್ರ ಡಿ.21ರಂದು ಬಿಡುಗಡೆಯಾಗಲಿದೆ.

‘ತಮ್ಮ ಎಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ, ನಮ್ಮ ಎಲೆಯಲ್ಲಿ ನೊಣವನ್ನು ಹುಡುಕಿದಂತಿದೆ ಬಿಜೆಪಿಗರ ದುಸ್ಥಿತಿ’

‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’

‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

- Advertisement -

Latest Posts

Don't Miss