Friday, November 22, 2024

Latest Posts

Shakthi Yojane-ಇದ್ದಕ್ಕಿದ್ದ ಹಾಗೆ ದೇವರ ಕಾಣಿಕೆ ಅಧಿಕ ಮಟ್ಟದಲ್ಲಿ ಸಂಗ್ರಹ ..! ಎಲ್ಲಿ ? ಏಕೆ ?

- Advertisement -

ರಾಜಕೀಯ ಸುದ್ದಿ: ಶಕ್ತಿ ಯೋಜನೆ ಪರಿಣಾಮ: ದೇವಾಲಯಗಳ ಹುಂಡಿಗಳಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ಹಣ: ಯೆಸ್, ಮಹಿಳಾ ಭಕ್ತರ ಸಂಖ್ಯೆ ಏರಿಕೆಯಿಂದ ದೇವಸ್ಥಾನಗಳಿಗೆ ಅಪಾರ ಪ್ರಮಾಣದ ಕಾಣಿಕೆ ಹರಿದುಬಂದಿದೆ. ಉಚಿತ ಪ್ರಯಾಣದ ಮೂಲಕ ಆಷಾಢ ಮಾಸದಲ್ಲಿ ಅಪಾರ ಪ್ರಮಾಣದ ಮಹಿಳಾ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ದೇವಸ್ಥಾನಗಳ ಹುಂಡಿ ಸಂಗ್ರಹದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಪ್ರಸಿದ್ಧ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಬುಧವಾರ ಹುಂಡಿ ಎಣಿಕೆ ನಡೆಯಿತು. ವಿವಿಧ ಸ್ವ-ಸಹಾಯ ಗುಂಪುಗಳ 100 ಕ್ಕೂ ಹೆಚ್ಚು ಮಹಿಳೆಯರು ಎಣಿಕೆ ಪ್ರಕ್ರಿಯೆಯಲ್ಲಿ ಸಹಾಯ ಮಾಡಿದರು. ದೇವಸ್ಥಾನದ ಹುಂಡಿ ಸಂಗ್ರಹವು ಈ ಋತುವಿನಲ್ಲಿ 1.77 ಕೋಟಿಗೆ ತಲುಪಿದೆ. ಇದಕ್ಕೆ ಸರ್ಕಾರದ ಶಕ್ತಿ ಯೋಜನೆ ಕಾರಣ ಎಂದು ದೇವಸ್ಥಾನದ ಸಿಬ್ಬಂದಿ ಅಭಿಪ್ರಾಯಪಟ್ಟಿದ್ದಾರೆ.

ಅದೇ ರೀತಿ ಬೆಳಗಾವಿ ಜಿಲ್ಲೆಯ ಸೌಂದತ್ತಿಯಲ್ಲಿರುವ ಪ್ರಸಿದ್ಧ ಯಲ್ಲಮ್ಮ ದೇವಸ್ಥಾನದ ಹುಂಡಿ ಸಂಗ್ರಹವೂ ಜೋರಾಗಿ ನಡೆಯುತ್ತಿದೆ. ಮೇ 17 ಮತ್ತು ಜೂನ್ 30 ರ ನಡುವೆ ದೇವಸ್ಥಾನದ ಹುಂಡಿಗಳಲ್ಲಿ 1.37 ಕೋಟಿ ರೂ. ಬಂದಿರುವ ಬಗ್ಗೆ ವರದಿಯಾಗಿದೆ. ಹುಂಡಿಗಳಲ್ಲಿ ನಗದು ಮಾತ್ರವಲ್ಲದೆ 4.44 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಸಂಗ್ರವಾಗಿದೆ.

ಇತ್ತ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ ಜೂನ್‌ ತಿಂಗಳು 3,03,48,146 ರೂ.ಗಳಷ್ಟು ಸಂಗ್ರಹವಾಗಿದೆ. ಮೇ ತಿಂಗಳಿಗೆ ಹೋಲಿಸಿದರೆ 84,55,342 ರೂ.ಗಳಷ್ಟು ಹೆಚ್ಚಳವಾಗಿದೆ ಎಂದು ದಕ್ಷಿಣ ಕನ್ನಡದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಅಧಿಕಾರಿಗಳು ಕೂಡ ಹುಂಡಿ ಸಂಗ್ರಹದಲ್ಲಿ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ. ಕೋಲಾರ ಜಿಲ್ಲೆ ಪ್ರಸಿದ್ಧ ದೇವಸ್ಥಾನಗಳಾದ ಕೋಲಾರಮ್ಮ ದೇವಸ್ಥಾನ, ಮುಳಬಾಗಲು ಕುರುಡುಮಲೆ ಶ್ರೀ ವಿನಾಯಕ ದೇವಸ್ಥಾನ, ಮುಳಬಾಗಲು ಆಂಜನೇಯ ಸ್ವಾಮಿ ದೇವಸ್ಥಾನ, ಚಿಕ್ಕ ತಿರುಪತಿ ಸೇರಿದಂತೆ ಇತರೆ ದೇವಸ್ಥಾನಗಳಲ್ಲಿ ಮಹಿಳಾ ಭಕ್ತರ ದಂಡೇ ಹರಿದು ಬರುತ್ತಿದೆ ಎಂದು ಮುಜರಾಯಿ ತಹಶೀಲ್ದಾರ್ ನಾಗವೇಣಿ ತಿಳಿಸಿದ್ದಾರೆ.

Siddaramaiah :ಸದನದಲ್ಲೇ ಸಿಎಂ ಸಿದ್ದರಾಮಯ್ಯ ಸವಾಲು

Veerappa Moily : ಬಿಜೆಪಿಯು ಸೇಡಿನ ರಾಜಕೀಯ ಮಾಡುತ್ತಿದೆ : ಎಂ.ವೀರಪ್ಪ ಮೊಯ್ಲಿ

Free checkup-ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನಿಂದ ಪತ್ರಕರ್ತರಿಗೆ ಆರೋಗ್ಯ ತಪಾಸಣೆ

- Advertisement -

Latest Posts

Don't Miss