ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ.
ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ
ಸೆಂಥೀಲ್ ಎಂಬ ವ್ಯಕ್ತಿಯ ಮಾಹಿತಿ ಆಧರಿಸಿ ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚುಕ್ಕೆ ಜಿಂಕೆ 7, ಕೃಷ್ಣಮೃಗ 10, ನರಿ 2, ಕಾಡು ಹಂದಿ 4, ಮುಂಗುಸಿ 3 ಹೀಗೆ ಒಟ್ಟು 29 ವನ್ಯ ಜೀವಿಗಳು ದಾಳಿ ವೇಳೆ ಪತ್ತೆಯಾಗಿವೆ. ಸಂಥೀಲ್ ಎಂಬುವ ವ್ಯಕ್ತಿಯನ್ನು ಬೆಂಗಳೂರಿನ ಹೆಬ್ಬಾಳದಲ್ಲಿ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಆತನ ಬಳಿಯಿದ್ದ ಕೃಷ್ಣ ಮೃಗದ ಕೊಂಬು, ಜಿಂಕೆ ಚರ್ಮ ಮತ್ತು ಕಾಡು ಹಂದಿಯ ಕೋರೆ ವಶಕ್ಕೆ ಪಡೆದಿದ್ದರು. ತನಿಖೆ ವೇಳೆ ಹೊರ ಬಂದ ಸುಳಿವಿನ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 29 ವನ್ಯ ಜೀವಿಗಳು ಪತ್ತೆಯಾಗಿವೆ. ಇನ್ನು ಈ ಕುರಿತು ದಾವಣಗೆರೆ ಅರಣ್ಯ ವಿಭಾಗದಲ್ಲಿ ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ.
ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣದ ಕುರಿತು ಸಭೆ : ಸಿಎಂ ಬಸವರಾಜ ಬೊಮ್ಮಾಯಿ
ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್