ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ.
ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸೇರಿ ವಿವಿಧ ಮಠದ ಸ್ವಾಮೀಜಿಗಳು ಭಾಗಿಯಾಗಿದ್ರು. ಇನ್ನು, ಸಚಿವ ಈಶ್ವರ್ ಖಂಡ್ರೆ, ಮಾಜಿ ಸಚಿವ ಪ್ರಭು ಚವ್ಹಾಣ್, ಶಾಸಕರಾದ ಶರಣು ಸಲಗರ, ಶೈಲೇಂದ್ರ ಬೆಲ್ದಾಳೆ, ಸಿದ್ದು ಪಾಟೀಲ್, ಮಾಜಿ ಶಾಸಕ ಅಶೋಕ್ ಖೇಣಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇದೇ ವೇಳೆ ಮಾತನಾಡಿದ, ಬಿ.ವೈ. ವಿಜಯೇಂದ್ರ, ಧರ್ಮ ರಕ್ಷಿಸುವಂತ ಕೆಲಸಗಳು ಆಗಬೇಕಿದ್ದು, ವೀರಶೈವ ಲಿಂಗಾಯತ ಸಮುದಾಯ ಒಂದಾಗಬೇಕು. ಎಲ್ಲಾ ಜಾತಿಗಳನ್ನು ಒಗ್ಗೂಡಿಸುವ ಶಕ್ತಿ, ವೀರಶೈವ ಲಿಂಗಾಯತ ಸಮಾಜಕ್ಕೆ ಇದೆ ಅಂತಾ ಹೇಳಿದ್ರು.