Sunday, July 6, 2025

Latest Posts

Sharath : ಜಲಪಾತದಲ್ಲಿ ಬಿದ್ದಿದ್ದ  ಯುವಕನ ಮೃತದೇಹ ವಾರದ ಬಳಿಕ ಪತ್ತೆ

- Advertisement -

Kundapura News : ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.

ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ  ಭಾನುವಾರ ಪತ್ತೆಯಾಗಿದೆ.

ಜು. 23ರಂದು ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತ ನೋಡಲು ಶರತ್ ಕುಮಾರ್  ಸ್ನೇಹಿತನೊಂದಿಗೆ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು.

ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸಿದ್ದವು. ಆದರೆ ತೀವ್ರ ಮಳೆ ಮತ್ತು ನೀರಿನ ರಭಸದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿತ್ತು. ಇದೀಗ ವಾರದ ಬಳಿಕ ಶರತ್ ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ  ಪತ್ತೆಯಾಗಿದೆ.

ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ , ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್‌ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸಿದ್ದರು. ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತು.

ಶರತ್‌ ಪತ್ತೆಗಾಗಿ ಜಲಪಾತ ಹರಿದು ಬರುವ ಬೇರೆ ಬೇರೆ ಕಡೆಗಳಲ್ಲಿ ಸಾಗರ ಬಾರಕೂರು ಅವರ ನೇತೃತ್ವದಲ್ಲಿ ಡ್ರೋನ್‌ ಕೆಮರಾದ ಮೂಲಕ ಹುಡುಕುವ ಪ್ರಯತ್ನ ಮಾಡಲಾಗಿತ್ತು. ಸತತ ಪ್ರಯತ್ನದ ನಂತರ ಇದೀಗ ಶರತ್  ಮೃತದೇಹ  ಪತ್ತೆಯಾಗಿದೆ.

PG Cook: ಮದುಮಗ ಆಗಬೇಕಿದ್ದವನು ಕೊಲೆಗಾರನಾದ

Shakunthala : ಶಕುಂತಲಾ ನಟರಾಜ್ ಬಂಧನ ಖಂಡಿಸಿ ಪ್ರತಿಭಟನೆ

Tiger : ಹುಲಿ ಗಣತಿ 2022ರ ವರದಿ ಪ್ರಕಾರ ಕರುನಾಡಿಗೆ 2ನೇ ಸ್ಥಾನ…!

- Advertisement -

Latest Posts

Don't Miss