Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಡಿ.ಕೆ.ಸುರೇಶರನ್ನ ಗುಂಡಿಕ್ಕಿ ಕೊಲ್ಲಬೇಕು ಎಂಬ ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ಮಾಡಿದ್ದಾರೆ. ಯಾರೇ ಆಗಲಿ ಲಕ್ಷ್ಮಣ ರೇಖೆಯನ್ನ ದಾಟಬಾರದು. ಗೋಡ್ಸೇ ಗಾಂಧಿಯನ್ನ ಹತ್ಯೆ ಮಾಡಿದ್ದಾರೆ ಎಂತಲೇ ಎಪ್ಪತ್ತು ವರ್ಷ ಕಾಂಗ್ರೆಸ್ ನವರು ಸರ್ಕಾರ ನಡೆಸಿಕೊಂಡು ಬಂದಿದ್ದಾರೆ. ಈ ಬಗ್ಗೆ ಬಿಜೆಪಿ ಕೂಡ ಉತ್ತರ ನೀಡಿದೆ. ಅದನ್ನೇ ಪದೇ ಪದೇ ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಶೆಟ್ಟರ್ ಹೇಳಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿದ ಶೆಟ್ಟರ್, ಈ ಬಗ್ಗೆ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆಗೆ ಶೆಟ್ಟರ್ ಸಭೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕುರಿತು ಸಭೆಯಲ್ಲಿ ಚರ್ಚೆಗಳಾಗಿವೆ. ಪಕ್ಷದ ಸಂಘಟನೆ ಕುರಿತಂತೆ ಸಭೆಯಲ್ಲಿ ಚರ್ಚೆಗಳಾಗಿವೆ. ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಧಾರವಾಡ ಲೋಕಸಭಾ ಚುನಾವಣೆಗೆ ಶೆಟ್ಟರ್ ಸ್ಪರ್ಧೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಪಕ್ಷದ ಹೈಕಮಾಂಡ್ ಸ್ಪರ್ಧೆ ವಿಚಾರದ ಬಗ್ಗೆ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ನಾನು ಬದ್ಧ. ಲೋಕಸಭಾ ಚುಮಾವಣೆ ಸ್ಪರ್ಧೆ ಬಗ್ಗೆ ಪಕ್ಷದ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಈ ಬಗ್ಗೆ ಪಕ್ಷದ ನಾಯಕರು ಯಾರೂ ಚರ್ಚೆ ಮಾಡಿಲ್ಲ. ಪಕ್ಷದ ನಾಯಕರು ಸ್ಪರ್ಧೆ ಇರಲಿ, ಯಾವುದೇ ನಿರ್ಧಾರ ಪ್ರಕಟಿಸಿದರೂ ನಾನು ಅದಕ್ಕೆ ಬದ್ಧ. ಹೈಕಮಾಂಡ್ ನಾಯಕರು ಸ್ಪರ್ಧೆ ಮಾಡಿ ಅಂದ್ರೆ ಸ್ಪರ್ಧೆ ಮಾಡ್ತೀನಿ. ಪರೋಕ್ಷವಾಗಿ ಧಾರವಾಡ ಲೋಕಸಭಾ ಚುನಾವಣೆಯ ಸ್ಪರ್ಧೆ ಬಗ್ಗೆ ಜಗದೀಶ್ ಶೆಟ್ಟರ್ ಇಂಗಿತ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ, ಬಾಂಗ್ಲಾದೇಶ ವಿಭಜನೆ ಮಾಡಿದರು, ಇನ್ನೇನು ಮಾಡುತ್ತಾರೋ ಗೊತ್ತಿಲ್ಲ: ಕಾಂಗ್ರೆಸ್ ವಿರುದ್ಧ ಮುತಾಲಿಕ್ ಕಿಡಿ
ಡಿವೋರ್ಸ್ ವದಂತಿಗೆ ಫುಲ್‌ಸ್ಟಾಪ್ ಹಾಕಿದ ನಟಿ ಅಂಕಿತಾ ಲೋಖಂಡೆ- ವಿಕ್ಕಿ ಜೈನ್