ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಮುಂದಾದ್ರಾ ಶೆಟ್ಟರ್?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಈಗಾಗಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಶೆಟ್ಟರ್, ಇನ್ನೂ ಕೆಲ ಬಿಜೆಪಿಗರನ್ನ ಕಾಂಗ್ರೆಸ್‌ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಶೆಟ್ಟರ್ ಮುಂದಾಗಿದ್ದಾರಾ ಅನ್ನೋ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ.

ಹಾಗಾಗಿ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್‌ನತ್ತ ಮುಖ ಮಾಡ್ತಾರಾ ಅನ್ನೋ ಪ್ರಶ್ನೆ ಮೂಡಿದೆ. ಹಲವು ದಿನಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಲೋಕಸಭಾ ಚುನಾವಣೆಗೆ ಶೆಟ್ಟರ್ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ ಕೂಡ ಮುನೇನಕೊಪ್ಪರನ್ನು ತಮ್ಮ ಬದಿ ಸೆಳೆಯಲು ಪ್ರಯತ್ನಿಸುತ್ತಿದೆ.

ಇತ್ತೀಚೆಗಷ್ಟೇ ಲೋಕಸಭಾ ಚುನಾವಣೆಯಲ್ಲಿ ಧಾರವಾಡಕ್ಕೆ ಅಭ್ಯರ್ಥಿ ಬದಲಾವಣೆ ಕುರಿತು ಅಭಿಯಾನ ಶುರುವಾಗಿದೆ. ಈ ಅಭಿಯಾನದ ನಡುವೆಯೇ ಲಿಂಗಾಯತ ಸಮುದಾಯವನ್ನ ಸೆಳೆಯಲು ಕಾಂಗ್ರೆಸ್ ಮತ್ತೊಂದು ಗಾಳ ಉರುಳಿಸಿದೆ. ಹೀಗಾಗಿ ಲೋಕಸಭಾ ಚುನಾವಣೆಗೆ ಶಂಕರ ಪಾಟೀಲ್ ಮುನೇನಕೊಪ್ಪ ಅವರನ್ನ ಸೆಳೆಯಲು ಕಾಂಗ್ರೆಸ್ ಯತ್ನಿಸುತ್ತಿದೆ.

ಹುಬ್ಬಳ್ಳಿ ಧಾರವಾಡ ನೂತನ ಕಮಿಷನರ್ ಆಗಿ ಸಂತೋಷ್ ಬಾಬು ಪ್ರಭಾರಿಯಾಗಿ ನೇಮಕ

ವರುಣನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ: ಧಾರವಾಡದಲ್ಲಿ ಕೃಷಿ ಕಾರ್ಯ ಆರಂಭ

ಸಚಿವರ ಕ್ಷೇತ್ರದಲ್ಲೇ ಬಸ್‌ಗಾಗಿ ವಿದ್ಯಾರ್ಥಿಗಳ ಪರದಾಟ..

About The Author