BREAKING NEWS: ವೆಸ್ಟ್ ಇಂಡೀಸ್ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟ: ಶಿಖರ್ ಧವನ್ ನಾಯಕ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ

ನವದೆಹಲಿ: ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶಿಖರ್ ಧವನ್ ಭಾರತವನ್ನು ಮುನ್ನಡೆಸಲಿದ್ದಾರೆ. ಏಕೆಂದರೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ತನ್ನ ಕೆಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ)ರಾಗಿ ಆಯ್ಕೆ ಮಾಡಲಾಗಿದೆ.

ಶಾರ್ದೂಲ್ ಠಾಕೂರ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷ್ದೀಪ್ ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

About The Author