ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಕೋರ್ಸ್‍ಗೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರವೇಶಾರ್ಥಿಗಳು ಮೊದಲನೆ ಸೆಮಿಸ್ಟರ್‍ಗೆ ರೂ.10,000/- ಹಾಗೂ ಎರಡನೇ ಸೆಮಿಸ್ಟರ್‍ಗೆ ರೂ.10,000/-ಗಳನ್ನು ಸೆಮಿಸ್ಟರ್ ಶುಲ್ಕವನ್ನು ಭರಿಸಬೇಕಾಗುತ್ತದೆ. ಆಸಕ್ತರು ಅರ್ಜಿಯನ್ನು ವಿಶ್ವವಿದ್ಯಾಲಯದ ಜಾಲತಾಣ www.uahs.edu.in ರ ಮೂಲಕ The Comptroller, UAHS, Shivamogga, payable at Shivamogga ಇವರ ಹೆಸರಿಗೆ ತೆಗೆದ 200/-ರೂ.ಗಳ (ಎಸ್ಸಿ/ಎಸ್ಟಿ/ಪ್ರವರ್ಗ-1 ರೂ.100/-) ಡಿ.ಡಿ.ಯನ್ನು ಲಗತ್ತಿಸಿ ಸೂಕ್ತ ದಾಖಲೆಗಳೊಂದಿಗೆ ದಿ: 01/08/2022 ರೊಳಗಾಗಿ ವಿಸ್ತರಣಾ ನಿರ್ದೇಶಕರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿಯ ಮೇಲೆ “Application for DAESI Course” ಎಂದು ನಮೂದಿಸುವುದು.
ಹೆಚ್ಚಿನ ಮಾಹಿತಿ ಹಾಗೂ ಕಾಲಕಾಲಕ್ಕೆ ವಿ.ವಿ. ನೀಡುವ ಸೂಚನೆಗಳಿಗಾಗಿ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




