ಶಿವಮೊಗ್ಗ: ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಸುವ ಕಾಲಾವಧಿ ವಿಸ್ತರಣೆ

ಶಿವಮೊಗ್ಗ : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 94ಎ(4) ರನ್ವಯ ನಮೂನೆ -57 ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು ದಿನಾಂಕ : 30-05-2022 ರಿಂದ ಒಂದು ವರ್ಷದ ಅವಧಿಯವರೆಗೆ ಕಾಲಾವಕಾಶವನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.

ಆದ್ದರಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ನಾಡ ಕಚೇರಿಗಳಲ್ಲಿ ಆಯಾ ಹೋಬಳಿ ವ್ಯಾಪ್ತಿಯ ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ನಮೂನೆ-57 ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು ದಿ: 30-05-2022 ರಿಂದ ಒಂದು ವರ್ಷದ ಅವಧಿಯವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.

About The Author