ಶಿವಮೊಗ್ಗ : ಗ್ರಾಮ ಪಂಚಾಯತ್ ಚುನಾವಣೆ ಹಾಗೂ ಟಿಇಟಿ ಪರೀಕ್ಷೆ ಹಿನ್ನೆಲೆಯಲ್ಲಿ ಮೇ 21ರಂದು ನಿಗದಿಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಮೇ 27ಕ್ಕೆ ಮುಂದೂಡಲಾಗಿದೆ.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮೇ 27ರಂದು ಶುಕ್ರವಾರ ಹೊಸನಗರ ತಾಲೂಕಿನ ಕೆರೆಹಳ್ಳಿ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯತ್ನಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಗ್ರಾಮ ವಾಸ್ತವ್ಯ ಮಾಡುವರು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದ್ದಾರೆ.




