Monday, December 23, 2024

Latest Posts

ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

- Advertisement -

ಶಿವಮೊಗ್ಗ: ಎಂ.ಆರ್.ಎಸ್. 110/11 ಕೆವಿ ಬಸ್‍ಬಾರ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ ವಿ.ವಿ.ಕೇಂದ್ರದ ವ್ಯಾಪ್ತಿಯ ಮಾರ್ಗಗಳಲ್ಲಿ ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇನ್ನೂ ಆರ್.ಎಂ.ಎಲ್ ನಗರದಲ್ಲಿ ಪರಿವರ್ತಕ ಸ್ಥಳಾಂತರಿಸುವ ಹಾಗೂ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಗಾರ್ಡನ್ ಏರಿಯ 1 ರಿಂದ 3ನೇ ಕ್ರಾಸ್, ಸವರ್‍ಲೈನ್ ರಸ್ತೆ, ಬಿ.ಹೆಚ್.ರಸ್ತೆ, ನೆಹರು ರಸ್ತೆ, ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಟಿಪ್ಪುನಗರ, ಮಂಜುನಾಥ ಬಡಾವಣೆ, ಆನಂದರಾವ್ ಬಡಾವಣೆ, ಡಿಪೋರಸ್ತೆ, ಬುದ್ಧನಗರ, ಮಾರ್ನಮಿಬೈಲು, ಎನ್.ಟಿ.ರಸ್ತೆ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಮಂಡ್ಲಿ ಬೈಪಾಸ್, ಭಾರತಿ ಕಾಲೋನಿ, ಪೇಪರ್ ಪ್ಯಾಕೇಜ್, ಪಿಯರ್‍ಲೈಟ್, ಇಲಿಯಾಜ್ ನಗರ 1 ರಿಂದ 4ನೇ ತಿರುವು, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಮಿಳಘಟ್ಟ, ನ್ಯೂಮಂಡ್ಲಿ, ಹಳೇಮಂಡ್ಲಿ, ಗಂಧರ್ವನಗರ, ಮುರಾದ್‍ನಗರ, ಸವಾಯಿಪಾಳ್ಯ, ಕುರುಬರಪಾಳ್ಯ, ಇಮಾಮ್ ಬಡಾವಣೆ, ದಿಲ್ಲಿ ದರಬಾರ್ ಹೋಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest Posts

Don't Miss