ಶಿವಮೊಗ್ಗ :ವಿವಿಧ ವಿದ್ಯುತ್ ಕಾಮಗಾರಿ ಹಿನ್ನಲೆಯಲ್ಲಿ ಜೂನ್ 29, 2022ರಂದು ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಬಗ್ಗೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಗಾಜನೂರು ಶಾಖಾ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 29 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಸಕ್ಕರೆಬೈಲು ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರು ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ತಿಳಿಸಿದೆ.




