ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಹೇಳಿದರು.

ಇಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.

ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೋರ್ಸ್ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

 

About The Author