Wednesday, February 5, 2025

Latest Posts

Shivamogga : ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು..!

- Advertisement -

ಶಿವಮೊಗ್ಗ : ಕಳೆದ ಒಂದು ತಿಂಗಳಿಂದ ಉಡುಪಿ(Udupi)ಯ ಕಾಲೇಜಿನ ಹಿಜಾಬ್ ವಿವಾದ(Hijab Controversy) ಜೀವಂತವಾಗಿರುವಾಗಲೇ, ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ(Sir M Vishweshwaraiah College)ಹಲವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದರಿಂದ ಕೆಲವು ಹೊತ್ತು ಕಾಲೇಜಿನಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಸರ್ ಎಂ ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯವಿದೆ, ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ತರಗತಿಗಳಲ್ಲಿ ಹಿಜಾಬ್ ಧರಿಸುತ್ತಾರೆ. ಇದು ಸರಿಯಾದ ಕ್ರಮವಲ್ಲ, ಆದ್ದರಿಂದ ನಾವು ಕೇಸರಿ ಶಾಲು ಧರಿಸಿ ತರಗತಿಗೆ ಬರುತ್ತೇವೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ನಂತರ ವಿದ್ಯಾರ್ಥಿಗಳ ಜೊತೆಗೆ ಕಾಲೇಜು ಆಡಳಿತ ಮಂಡಳಿ ಚರ್ಚೆ ನಡೆಸಿದ್ದು, ವಿವಿಧ ಸಂಘಟನೆಗಳ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ಮಾತನಾಡಿದ ಸರ್ ಎಂ ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜು ಪ್ರಾಂಶುಪಾಲ ಡಾ. ಉಮಾಶಂಕರ್(Principal Dr. Umashankar) ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು ಕಾಲೇಜಿನ ಕಾಯುವ ರೂಮ್ ನಲ್ಲಿ ಹಿಜಾಬ್ ತೆಗೆದು ಸಮವಸ್ತ್ರದಲ್ಲಿ ತರಗತಿಗೆ ಬರಬೇಕು, ಈ ನಿಯಮ ಗುರುವಾರದಿಂದ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು. ಇನ್ನು ಹಿಜಾಬ್ ವಿವಾದ ದಿಡೀರ್ ಆರಂಭವಾಗಿದ್ದಲ್ಲ, ಕಳೆದವಾರ ವಿದ್ಯಾರ್ಥಿಯೊಬ್ಬಳ ಜೊತೆಗೆ ವಿದ್ಯಾರ್ಥಿಯೊಬ್ಬ ಮಾತನಾಡುತ್ತಿದ್ದಾಗ ಗಲಾಟೆಯಾಗಿತ್ತು. ವಿದ್ಯಾರ್ಥಿನಿಯ ಸಮುದಾಯಕ್ಕೆ ಸೇರಿದ ಕೆಲವು ಯುವಕರು ಆಕೆಯೊಂದಿಗೆ ಮಾತನಾಡದಂತೆ ವಿದ್ಯಾರ್ಥಿಗೆ ಎಚ್ಚರಿಸಿದ್ದರು. ಇದರಿಂದ ವಿವಾದ ಹುಟ್ಟಿಕೊಂಡಿರುವ ಸಾಧ್ಯತೆಯಿದೆ ಎಂದು ಪ್ರಾಂಶುಪಾಲ ಡಾ. ಉಮಾಶಂಕರ್ ತಿಳಿಸಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ಕಾಲೇಜು ಭದ್ರಾವತಿಯ ಪ್ರತಿಷ್ಠಿತ ಕಾಲೇಜಿನಲ್ಲಿ ವಿವಿಧೆಡೆಯ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮುಸ್ಲಿಂ ಸಮುದಾಯಕ್ಕೆ ಸೇರಿದ ಸುಮಾರು 250 ವಿದ್ಯಾರ್ಥಿನಿಯರು ಈ ಕಾಲೇಜಿನಲ್ಲಿ ಓದುತ್ತಿದ್ದಾರೆ.

- Advertisement -

Latest Posts

Don't Miss