ಹುಬ್ಬಳ್ಳಿಯಲ್ಲಿ ಶಿವಾಜಿ ಜಯಂತಿ: ಹಿಂದೂ ಸಾಮ್ರಾಟನ ಕಾರ್ಯವೈಖರಿ ಕೊಂಡಾಡಿದ ಜೋಶಿ, ಲಾಡ್..!

Hubli News: ಹುಬ್ಬಳ್ಳಿ: ಹಿಂದೂ ಸಾಮ್ರಾಜ್ಯವನ್ನು ಕಟ್ಟಲು ಹಾಗೂ ಝೀರೋದಿಂದ ಬಹುದೊಡ್ಡ ಸಾಮ್ರಾಜ್ಯ ಸ್ಥಾಪನೆ ಮಾಡಿರುವುದು ಯಾರಾದರೂ ಇದ್ದಾರೆ ಎಂದರೇ ಅದು ಛತ್ರಪತಿ ಶಿವಾಜಿ ಮಹಾರಾಜರು ಮಾತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಸಂತೋಷ ಲಾಡ್ ಅಭಿಪ್ರಾಯ ಪಟ್ಟರು.

ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ, ಛತ್ರಪತಿ ಶಿವಾಜಿ ಮಹಾರಾಜರ 397ನೇ ಜಯಂತೋತ್ಸವದಲ್ಲಿ ಮಾತನಾಡಿ ಛತ್ರಪತಿ ಶಿವಾಜಿ ಮಹಾರಾಜರ ಕಾರ್ಯವನ್ನು ಹಾಗೂ ಅವರು ಸಾಮ್ರಾಜ್ಯ ಕಟ್ಟಿದ ಕಾರ್ಯವೈಖರಿಯನ್ನು ಕೊಂಡಾಡಿದರು.

ಇನ್ನೂ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಕ್ಕಳು ಛತ್ರಪತಿ ಶಿವಾಜಿ ಮಹಾರಾಜರ ವೇಷಭೂಷಣ ತೊಟ್ಟು ಕಂಗೊಳಿಸಿರುವುದು ಕೂಡ ವಿಶೇಷವಾಗಿದೆ. ಅಲ್ಲದೇ ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗನ್ನು ತಂದಿದ್ದಾರೆ.

ಅಭಿಮಾನಿಗಳಿಗೆ, ಕರುನಾಡ ಜನತೆಗೆ ಧನ್ಯವಾದ ತಿಳಿಸಿದ ಡಿಬಾಸ್ ದರ್ಶನ್

ಈ ಷರತ್ತು ಒಪ್ಪಿದರೆ ಮಾತ್ರ, ಇಂಡಿಯಾ ಕೂಟದೊಟ್ಟಿಗೆ ಹೊಂದಾಣಿಕೆ: ಸಮಾಜವಾದಿ ಪಾರ್ಟಿ

ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ರಾಜಸ್ಥಾನ ಬುಡಕಟ್ಟು ಮುಖಂಡ ಮಹೇಂದ್ರ ಜೀತ್

About The Author