Banglore News:
ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಕೃತ್ಯಗಳಿಗೆ ಇತಿಶ್ರೀ ಹಾಕುವ ನಿಟ್ಟಿನಲ್ಲಿ ಕಠಿಣ ಕೆಲಸ ಆಗಲೇಬೇಕಾಗಿದೆ ಎಂದರು.
ಹಾಗೆಯೇ ರಾಜ್ಯದಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳಿಗೆ ಹಲವು ಸಂಘಟನೆಗಳ ಕುಮ್ಮಕ್ಕಿದೆ. ಪಿಎಫ್ಐ, ಎಸ್ಡಿಪಿಐ ಸಂಘಟನೆ ಇದರ ಹಿಂದೆ ಇದೆ. ವಿಪಕ್ಷದವರು ಇದನ್ನು ರಾಜಕೀಕರಣಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದೆಲ್ಲದಕ್ಕೂ ಬ್ರೇಕ್ ಹಾಕುವಂತಹ ಕೆಲಸವಾಗಬೇಕು. ಈಗಾಗಲೇ ಗೃಹಸಚಿವರು ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
“ಮೊದಲು ಕಿತಾಪತಿ ಮಾಡೋದು ಬಿಜೆಪಿಯವರೇ”:ಈಶ್ವರಪ್ಪ ವಿರುದ್ಧ ಸಿದ್ದು ಕಿಡಿ
ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ