- Advertisement -
Shivamogga:
ಶಿವಮೊಗ್ಗದಲ್ಲಿಇಂದು ಮತ್ತೋರ್ವನಿಗೆ ಚಾಕು ಇರಿತವಾಗಿದೆ.ಬಜರಂಗದಳ ಕಾರ್ಯಕರ್ತ ಸುನಿಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಆತನನ್ನು ಭದ್ರಾವತಿ ಆಸ್ಪತ್ರೆಯಿಂದ ಶಿವಮೊಗ್ಗದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುನಿಲ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಆಸ್ಪತ್ರೆ ಸಿಬ್ಬಂದಿ ಸುನಿಲ್ನನ್ನು ಆಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ.ಮುಬಾರಕ್ & ಗ್ಯಾಂಗ್ ಇಂದು ಬೆಳಗ್ಗೆ ಸುನಿಲ್ ಮೇಲೆ ಹಲ್ಲೆ ಮಾಡಿತ್ತು. ಹೆಚ್ಚಿನ ಚಿಕಿತ್ಸೆಯ ಅಗತ್ಯತೆ ಬಂದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
- Advertisement -