Monday, December 23, 2024

Latest Posts

Shivaraj kumar- “ಕರಟಕ ದಮನಕ”ಹ್ಯಾಟ್ರಿಕ್ ಹೀರೋ ಶಿವಣ್ಣ ಹಾಗೂ ಡ್ಯಾನ್ಸ್‌ ಕಿಂಗ್ ಪ್ರಭುದೇವ

- Advertisement -

ಸಿನಿಮಾ ಸುದ್ದಿ: ಹ್ಯಾಟ್ರಿಕ್ ಹೀರೋ ಶಿವಣ್ಣ & ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೇ ಅಭಿನಯಿಸಿರುವ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ, ವಿ.ಹರಿಕೃಷ್ಣ ಸಂಗೀತ ನಿರ್ದೇಶನದ ‘ಕರಟಕ ದಮನಕ’ ಚಿತ್ರದ EXCLUSIVE ಮೊದಲ ಝಲಕ್ ಬಿಡುಗಡೆಯಾಗಿದೆ.

‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು “ಕರಟಕ” ಇನ್ನೊಂದರ ಹೆಸರು “ದಮನಕ”. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು.
ಆ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ…!!
ಎಚ್ಚರಿಕೆ’ ಎಂಬ ಈ ಬರಹದ ಮೂಲಕ ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ನಿರ್ದೇಶಕ ಯೋಗರಾಜ್ ಭಟ್.

ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ.

ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್ ಹಾಗೂ ರವಿ ಈ ಚಿತ್ರಕ್ಕೆ ಕಥೆ ರಚಿಸಿದ್ದು, ಚಿತ್ರಕಥೆಯನ್ನು ಯೋಗರಾಜ್ ಭಟ್, ರವಿ ಹಾಗೂ ಸುಬ್ರಹ್ಮಣ್ಯ ಬರೆದಿದ್ದಾರೆ.

Politics- ಧಾರವಾಡ ಜಿಲ್ಲೆಯಲ್ಲಿ ಶುರುವಾದ ಪವರ್ ಪಾಲಿಟಿಕ್ಸ್.

Shivalinge gowda : ಸದನದಲ್ಲಿ ಕೆ.ಎಂ ಶಿವಲಿಂಗೇಗೌಡ, ಆರ್. ಅಶೋಕ್ ಮಾತಿನ ಚಕಮಕಿ

Laxman savadi-ವಿಪಕ್ಷ ನಾಯಕರಿಗೆ ಲೇವಡಿ ಮಾಡಿದ ಲಕ್ಷ್ಮಣ್ ಸವದಿ

- Advertisement -

Latest Posts

Don't Miss