Monday, December 23, 2024

Latest Posts

Shivaraj Tangadagi : ಹತಾಶೆಯಿಂದ ಹೆಚ್.ಡಿ.ಕೆ ಮಾತನಾಡುತ್ತಿದ್ದಾರೆ : ಸಚಿವ ತಂಗಡಗಿ

- Advertisement -

Political News : ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶ ತಣ್ಣೀರು ಎರೆಚಿದಂತಾಗಿದ್ದು, ಹೀಗಾಗಿ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ.

ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ. ಜನ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಗೆ ಅವಕಾಶ ನೀಡಿದ್ದಾರೆ. ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಇದನ್ನು ಸಹಿಸಲು ಆಗದ ವಿಪಕ್ಷದ ನಾಯಕರು ಇಲ್ಲ, ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಪರಿಣಾಮ‌ ಲೋಕಸಭಾ ಚುನಾವಣೆಯಲ್ಲೂ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಗರು ತಮ್ಮ ಆಡಳಿತಾವಧಿಯಲ್ಲಿ ದಲಿತರ ಬಗ್ಗೆ  ಯಾವುದೇ ಯೋಜನೆ ರೂಪಿಸಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಹಣವನ್ನು ಎಲ್ಲೆಲ್ಲಿ ಬಳಕೆ ಮಾಡಬೇಕು ಎಂಬ ಅರಿವು ನಮ್ಮ ಸರ್ಕಾರಕ್ಕೆ ಇದೆ.

ಈ ಎರಡು ಸಮುದಾಯಗಳ ಹಣ ಸದ್ಭಳಕೆ ಬಗ್ಗೆ ಸೂಕ್ತ ‌ಕಾನೂನನ್ನು ತಂದಿದ್ದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಈ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ಯೋಗ್ಯತೆ ಇಲ್ಲ ಎಂದರು.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಲಿದ್ದಾರೆ ಎಂದು ಭಾವಿಸಿದ್ದೆವು. ಆದರೆ ರಾಜ್ಯಕ್ಕೆ ಬೊಮ್ಮಾಯಿ ಅವರ ಕೊಡುಗೆ ಶೂನ್ಯ.‌ ಪ್ರಮುಖ ವಿಪಕ್ಷವಾಗಿ‌ ಬಿಜೆಪಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಕೇವಲ ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Siddaramaiah : ಹೆಚ್.ಡಿ ಕುಮಾರಸ್ವಾಮಿ ಆರೋಪಗಳು ಹಿಟ್ ಆ್ಯಂಡ್ ರನ್ ಕೇಸ್ : ಸಿಎಂ ಸಿದ್ದರಾಮಯ್ಯ

Dr. K Sudhakar : ದಕ್ಷಿಣ ಕರ್ನಾಟಕದಲ್ಲಿ ಹೊಸ ಪಕ್ಷ ಕಟ್ಟುತ್ತಾರಾ ಡಾ.ಕೆ ಸುಧಾಕರ್..?! ಮಾತಿನ ಮರ್ಮವೇನು..?!

Priyank Kharge : ಶ್ರಮಜೀವಿಗಳ  ಬೆವರಲ್ಲಿ ಬೆಚ್ಚಗೆ ಬಿಟ್ಟಿ ತಿಂದವರ ಮೈ ಬೆಳ್ಳಗಿರುತ್ತದೆ : ಖರ್ಗೆ ಖಡಕ್  ಉತ್ತರ

- Advertisement -

Latest Posts

Don't Miss