Saturday, July 12, 2025

Latest Posts

Shivaraj Thangadagi : ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಚಿಪ್ಪು ಗ್ಯಾರಂಟಿ : ಸಚಿವ ಶಿವರಾಜ್ ತಂಗಡಗಿ

- Advertisement -

Chithradurga News: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ.

ಶ್ರೀ‌ ಸಿದ್ದರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳನ್ನು ಮಂಗಳವಾರ ಸಚಿವರು ಭೇಟಿಯಾದ ಬಳಿಕ  ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ರಾಜ್ಯದಲ್ಲಿ ನಾಲ್ಕು ವರ್ಷಗಳ ಬಿಜೆಪಿ ದುರಾಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿಯವರು ನಾಲ್ಕು ವರ್ಷ ಜನತೆಗೆ ಚಿಪ್ಪು ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ‌ ಜನ ಆ ಪಕ್ಷಕ್ಕೆ ಚಿಪ್ಪು ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ಜನ ಚಿಪ್ಪು ನೀಡುವುದು ಗ್ಯಾರಂಟಿ ಎಂದು ಛೇಡಿಸಿದರು.‌

9 ವರ್ಷದ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸವನ್ನು ಮಾಡಿಲ್ಲ. ವಿದೇಶದಿಂದ ಕಪ್ಪು ಹಣ ತರುತ್ತೇವೆ. ಉದ್ಯೋಗ ಸೃಷ್ಟಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಸುಳ್ಳು ಆಶ್ವಾಸನೆ ನೀಡುತ್ತಾ  ಜನತೆಗೆ ಮೋಸ ಮಾಡಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. 9 ವರ್ಷದಲ್ಲಿ ದೇಶ ಹಾಳು ಮಾಡಲು ಬೇಕಾದ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.‌

Sharavathi :ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ

Siddaramaiah : ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

Ommenn chandy: ಕೇರಳದ ಮಾಜಿ ಮುಖ್ಯಮಂತ್ರಿ ನಿಧನ

- Advertisement -

Latest Posts

Don't Miss