Political News: ಕಳೆದ 2ವರೆ ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದವರು ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ನಮಗೆ ಈ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಬರೀ 3 ಸಾವಿರ ಚಿಲ್ಲರೆ ಕೋಟಿ ನೀಡಿದ್ದಾರೆ. ಆದರೆ ಆಂಧ್ರಪ್ರದೇಶಕ್ಕೆ 2024ರಿಂದ ಈವರೆಗೆ 3 ಲಕ್ಷ ಕೋಟಿೂ ಮೀರಿ ಹಣ ನೀಡಿದ್ದಾರೆಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.
ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದಿರುವ ಅವರು, ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರವಿದೆ ಎನ್ನುವ ಏಕೈಕ ಕಾರಣಕ್ಕೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಕಳೆದ ಎರಡೂವರೆ ವರ್ಷಗಳಲ್ಲಿ ಮಾಡಿದ ದ್ರೋಹಗಳು ಒಂದೆರೆಡಲ್ಲ.
ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆಯಲ್ಲಿ ನ್ಯಾಯಯುತ ಪಾಲು ನೀಡದೆ ವಂಚಿಸುತ್ತಿರುವುದಲ್ಲದೆ, ಕರ್ನಾಟಕದ ನೀರಾವರಿ, ರೈಲ್ವೆ, ಹೆದ್ದಾರಿ ಸೇರಿದಂತೆ ಎಲ್ಲಾ ತೆರನಾದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಮತ್ತು ಅನುಮತಿ ನೀಡದೆ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿಗೆ ಮತ ನೀಡದಿದ್ದರೆ ಮೋದಿಯವರ ಆಶೀರ್ವಾದದಿಂದ ವಂಚಿತರಾಗುತ್ತೀರಿ ಎನ್ನುವ ಬೆದರಿಕೆ ಒಡ್ಡಿದ್ದ ಬಿಜೆಪಿ ನಾಯಕ ಜೆಪಿ ನಡ್ಡಾ ಅವರ ಹೇಳಿಕೆಯನ್ನು ಅಕ್ಷರಶಃ ಕೇಂದ್ರ ಸರ್ಕಾರ ಕಾರ್ಯರೂಪಕ್ಕೆ ತಂದಂತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಪಕ್ಷದಿಂದ ಗೆದ್ದು ಸಂಸದರು ಮತ್ತು ಕೇಂದ್ರದಲ್ಲಿ ಮಂತ್ರಿಗಳು ಆಗಿರುವವರಿಗೆ ಪ್ರಧಾನಿಗಳ ಎದುರು ಈ ಮಲತಾಯಿ ಧೋರಣೆಯ ವಿರುದ್ಧ ಮಾತನಾಡುವ ಧೈರ್ಯವಾಗಲಿ, ಮತನೀಡಿದ ಜನರ ಬಗ್ಗೆ ಕಾಳಜಿಯಾಗಲಿ ಯಾವುದೂ ಇಲ್ಲ. ಮೈಕ್ ಮುಂದೆ ಏರುದನಿಯಲ್ಲಿ ದ್ವೇಷ ಬಿತ್ತುವ ಇವರಿಗೆ ಮೋದಿಯವರನ್ನು ಕಂಡೊಡನೆ ಕೈಕಾಲು ನಡುಗುತ್ತದೆ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಸಿಎಂ ವ್ಯಂಗ್ಯವಾಡಿದ್ದಾರೆ.
ಕನ್ನಡಿಗರಿಗೆ ಇಷ್ಟೆಲ್ಲಾ ಅನ್ಯಾಯಗಳು ಆಗುತ್ತಿದ್ದರೂ ಅದರ ವಿರುದ್ಧ ದನಿಯೆತ್ತದೆ ಕೇವಲ ಸ್ವಹಿತಕ್ಕಾಗಿ ಕೇಂದ್ರ ಸರ್ಕಾರದ ಅಡಿಯಾಳಿನಂತೆ ವರ್ತಿಸುತ್ತಿರುವ ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್ ಮತ್ತು ಅದರ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಡೆ ಅಸಹ್ಯ ಹುಟ್ಟಿಸುವಂತಿದೆ. ಒಂದು ಸಚಿವ ಸ್ಥಾನಕ್ಕಾಗಿ ಇಷ್ಟೆಲ್ಲಾ ನಡುಬಗ್ಗಿಸಿ ನಿಲ್ಲಬೇಕೇ? ಇದು ನನ್ನೊಬ್ಬನ ಪ್ರಶ್ನೆ ಅಲ್ಲ, ನೊಂದ ಕನ್ನಡಿಗರೆಲ್ಲರ ಪ್ರಶ್ನೆ ಎಂದು ಸಿಎಂ ಕೇಂದ್ರ ಸರ್ಕಾರದ ವಿರುದ್ಧ ಮತ್ತು ಕೇಂದ್ರ ಸಚಿವರಾದ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರವಿದೆ ಎನ್ನುವ ಏಕೈಕ ಕಾರಣಕ್ಕೆ ಕೇಂದ್ರದ @narendramodi ಅವರ ಸರ್ಕಾರ ಕಳೆದ ಎರಡೂವರೆ ವರ್ಷಗಳಲ್ಲಿ ಮಾಡಿದ ದ್ರೋಹಗಳು ಒಂದೆರೆಡಲ್ಲ.
ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆಯಲ್ಲಿ ನ್ಯಾಯಯುತ ಪಾಲು ನೀಡದೆ ವಂಚಿಸುತ್ತಿರುವುದಲ್ಲದೆ, ಕರ್ನಾಟಕದ ನೀರಾವರಿ, ರೈಲ್ವೆ, ಹೆದ್ದಾರಿ ಸೇರಿದಂತೆ ಎಲ್ಲಾ… pic.twitter.com/F75rL4ZjBB
— Siddaramaiah (@siddaramaiah) January 21, 2026



