Friday, June 20, 2025

Latest Posts

‘ಹೆಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ?’

- Advertisement -

Political News: ಸಿಎಂ ಸಿದ್ದರಾಮಯ್ಯರ ಮಗ ಯತೀಂದ್ರ ಸಿದ್ದರಾಮಯ್ಯ ಅವರ ವೀಡಿಯೋ ವೈರಲ್ ಆಗುತ್ತಿದ್ದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಇವರಿಬ್ಬರ ಬಗ್ಗೆ ತೀರಾ ವಾಗ್ದಾಳಿ ನಡೆಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡುವ ಮೂಲಕ, ಸಿ್ದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದೇ ರೀತಿ ಎರಡ್ಮೂರು ಸಲ ಸಿಎಂ ಮತ್ತು ಮಾಜಿ ಸಿಎಂ, ಇದೇ ವಿಷಯಕ್ಕೆ ಪರಸ್ಪರ ಆಕ್ರೋಶ ಹೊರಹಾಕಿದ್ದರು. ಇದೀಗ ಮತ್ತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸುಳ್ಳು ಸುದ್ದಿ ವೀರರು ಎಂದು ಹೇಳಿದ್ದಾರೆ.

ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿರುವ ಈ ಮಾಜಿ ಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ.

ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಬಾರದೇ? ಮಾಜಿ ಶಾಸಕ ಡಾ.ಯತೀಂದ್ರ ಅವರ ಜೊತೆಗಿನ ನನ್ನ ಸಂಭಾಷಣೆ ವರುಣ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಂಬಂಧಪಟ್ಟಿದ್ದು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರೂ ಹೆಚ್.ಡಿ.ಕುಮಾರಸ್ವಾಮಿ ಇಂದು ಮತ್ತೊಂದು ಸುಳ್ಳನ್ನು ಸೃಷ್ಟಿಸ ಜನತೆಯ ದಾರಿ ತಪ್ಪಿಸಲು ಹೆಣಗಾಡಿದ್ದಾರೆ. ನಮ್ಮ ಸಂಭಾಷಣೆಯಲ್ಲಿ ಪ್ರಸ್ತಾಪವಾಗಿರುವ ವಿವೇಕಾನಂದ ಅವರು ಮೈಸೂರು ತಾಲೂಕಿನ ಬಿಇಒ ಎನ್ನುವುದು ಸ್ಪಷ್ಟವಾಗಿದ್ದರೂ ಯಾವುದೋ ವರ್ಗಾವಣೆಯ ಪಟ್ಟಿಯಲ್ಲಿನ ವಿವೇಕಾನಂದ ಎಂಬ ಅಧಿಕಾರಿಯ ಹೆಸರು ಹುಡುಕಿ ತನ್ನ ಸುಳ್ಳಿಗೆ ಸಾಕ್ಷಿ ನೀಡುವ ಹತಾಶ ಪ್ರಯತ್ನ ಮಾಡಿದ್ದಾರೆ. ಇದನ್ನು ಮಾನಸಿಕ ಅಸ್ವಸ್ಥತೆ ಎನ್ನದೆ ಬೇರೆ ಏನು ಹೇಳಲು ಸಾಧ್ಯ? ರಾಜ್ಯದಲ್ಲಿ ಕುಮಾರಸ್ವಾಮಿ ಎಂಬ ಹೆಸರಿನವರು ಸಾವಿರಾರು ಮಂದಿ ಇದ್ದಾರೆ. ಅವರಲ್ಲಿಯೂ ಒಂದಷ್ಟು ಪಕ್ಕಾ ಕ್ರಿಮಿನಲ್ ಗಳೂ ಇದ್ದಾರೆ.

ಹೆಸರಿನ ಕಾರಣಕ್ಕಾಗಿ ಅವರೆಲ್ಲರ ಪಾಪಕರ್ಮಗಳ ಹೊರೆಯನ್ನು ಹೆಚ್.ಡಿ.ಕುಮಾರಸ್ವಾಮಿಯವರ ತಲೆ ಮೇಲೆ ಹೊರಿಸಲಿಕ್ಕೆ ಆಗುತ್ತಾ? ‘ಎಲ್ಲಿದಿಯಪ್ಪಾ ನಿಖಿಲ್’ ಎಂದು ಸಾರ್ವಜನಿಕ ಸಭೆಯಲ್ಲಿ ಕುಮಾರಸ್ವಾಮಿ ಕೂಗಿದಾಗ ಅಲ್ಲಿ ಎಷ್ಟು ಮಂದಿ ಆ ಹೆಸರಿನವರಿದ್ದರೋ ಏನೋ? ಓಗೊಟ್ಟಿದ್ದು ಇವರ ಮಗ ಮಾತ್ರ ಅಲ್ವಾ? ಉಳಿದವರು ಓಗೊಟ್ಟಿದ್ದರೂ ಅವರನ್ನು ಮಕ್ಕಳು ಎಂದು ಇವರು ಒಪ್ಪಿಕೊಳ್ಳುತ್ತಿದ್ರಾ? ಒಬ್ಬ ಜವಾಬ್ದಾರಿಯುತ ರಾಜಕೀಯ ನಾಯಕನಾಗಿ ಕುಮಾರಸ್ವಾಮಿಯವರು ವಿಶ್ವಾಸಾರ್ಹ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡಬೇಕೇ ಹೊರತು ತಾವೇ ಸೃಷ್ಟಿಸಿರುವ ಸುಳ್ಳಿನ ಕಂತೆಗಳನ್ನಲ್ಲ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯಗಳಿವೆ. ಆದರೆ ಅವರೆಂದೂ ಈ ರೀತಿಯ ಸಡಿಲ ಮಾತುಗಳನ್ನು ಆಡಿಲ್ಲ. ಕುಮಾರಸ್ವಾಮಿಯವರು ಕನಿಷ್ಠ ಅವರ ಅಣ್ಣ ಹೆಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ? ಡಾ.ಯತೀಂದ್ರ ವಿರುದ್ದ ತಾನು ಮಾಡಿರುವ ಆರೋಪ ಸುಳ್ಳು ಎನ್ನುವುದು ಹೆಚ್.ಡಿ.ಕುಮಾರಸ್ವಾಮಿವಯರಿಗೆ ಖಂಡಿತ ಮನವರಿಕೆ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ತಪ್ಪನ್ನು ಒಪ್ಪಿಕೊಂಡರೆ ಯಾರೂ ಸಣ್ಣವರಾಗುವುದಿಲ್ಲ. ಒಂದು ಸುಳ್ಳನ್ನು ಸಮರ್ಥಿಸಲು ನೂರು ಸುಳ್ಳುಗಳನ್ನು ಹೇಳುವುದರ ಬದಲಿಗೆ ಮಾಡಿದ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಉತ್ತಮ ನಡೆ. ಆ ಸದ್ಬುದ್ದಿ ಅವರಿಗೆ ಬರಲಿ ಎಂದು ಹಾರೈಸುತ್ತೇನೆ.

ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದವಾಗಿದೆ. ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ ಅದರ ಬಗ್ಗೆ ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ. ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ. ಅಡಿಕೆ ಕದ್ದು ಹೋದ ಮಾನ ಆನೆ ಕೊಟ್ಟರೂ ಬರಲ್ಲ ಎಂದು ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತುಮಕೂರು ತಾಲೂಕು ಕಚೇರಿಗೆ ಸಚಿವರ ಧಿಡೀರ್ ಭೇಟಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು

‘ಪ್ರಧಾನಿ ಮೋದಿಯವರ ಈ ನಡೆಯನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?’

‘ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು’

- Advertisement -

Latest Posts

Don't Miss