ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಒಂದು ಕಡೆ RSS ಹಿಡನ್ ಅಜೆಂಡಾ ಜಾರಿಗೊಳಿಸುತ್ತಾ ಮತ್ತೊಂದು ಕಡೆ ಬೆಲೆ ಏರಿಕೆ, ಹಣದುಬ್ಬರ, ಭ್ರಷ್ಟಾಚಾರ, ದುರಾಡಳಿತದಿಂದ ನಾಡಿನ, ದೇಶದ ಜನತೆಯನ್ನು ವಿಪರೀತ ಸಂಕಷ್ಟಕ್ಕೆ ಸಿಲುಕಿಸಿದ್ದರು. ನಾಡಿನ ಜನ ಈ ಎಲ್ಲಾ ದುಷ್ಟಾಚಾರವನ್ನು ಸಮರ್ಥವಾಗಿ ಧಿಕ್ಕರಿಸಿ ಸೋಲಿಸಿದ್ದಾರೆ ಎಂದರು.
ಮನುಸ್ಮೃತಿಯ ಜಾತಿ ಆಧಾರಿತ ಶೋಷಿತ ನ್ಯಾಯಪದ್ಧತಿಯನ್ನು ಜಾರಿಗೆ ತರುವ ಮನಸ್ಥಿತಿಯವರು ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸುತ್ತಾ ಸಂವಿಧಾನವನ್ನು ಮುಗಿಸಲು ಯತ್ನಿಸುತ್ತಿದ್ದಾರೆ.
Laxmi hebbalkar: ಸಂಜೀವಿನಿ ಸೂಪರ್ ಮಾರ್ಕೆಟ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ