ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಬೇಡ. ಹೈಕಮಾಂಡ್ ಕೂಡ ಯಾವುದೇ ಬದಲಾವಣೆ ಮಾಡುವುದರ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ನನಗೆ ತಿಳಿದಂತೆ, ಅಧಿಕಾರ ಹಂಚಿಕೆಯ ಕುರಿತು ಯಾವುದೇ ಮಾತುಕತೆ ನಡೆದಿಲ್ಲ. ನಮ್ಮ ತಂದೆಯವರಾಗಲಿ, ಕೆಲ ಹಿರಿಯ ಸಚಿವರಿಗಾಗಲಿ ಈ ಬಗ್ಗೆ ಚರ್ಚೆ ಇರಲಿಲ್ಲ. ಯಾರಿಗೆ ಎಷ್ಟು ಶಾಸಕರ ಬೆಂಬಲ ಇದೆ ಎಂಬಂತಹ ಅಂಕಿ-ಅಂಕಿ ಚರ್ಚೆ ಮಾಡಬೇಡಿ. ಎಲ್ಲಾ ಶಾಸಕರ ಬೆಂಬಲ ನನ್ನ ತಂದೆಗೆ ಇದೆ,” ಎಂದಿದ್ದಾರೆ.
ಇತ್ತೀಚೆಗೆ ಡಿಕೆಶಿ ಪರವಾಗಿ ಆದಿಚುಂಚನಗಿರಿ ಮಠದ ಸ್ವಾಮೀಜಿಗೆ ನೀಡಲಾದ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಾರನ್ನು ಸಿಎಂ ಮಾಡಬೇಕು, ಯಾರನ್ನು ಮಾಡಬಾರದು ಎನ್ನುವುದು ನಮ್ಮ ಪಕ್ಷದ ಶಾಸಕರಿಗೂ ಮತ್ತು ಹೈಕಮಾಂಡ್ಗೆ ಬಿಟ್ಟಿರುವ ವಿಚಾರ. ಬೇರೆಯವರ ಅಭಿಪ್ರಾಯ ಅನಗತ್ಯ ಎಂದಿದ್ದಾರೆ.
ವರದಿ : ಲಾವಣ್ಯ ಅನಿಗೋಳ




