ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ : ಸಿದ್ದರಾಮಯ್ಯ

ವಿಜಯಪುರ: ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ನಿನ್ನೆ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ ಪ್ರತಿ ವರ್ಷ ರೂ.40,000 ಕೋಟಿ ವೆಚ್ಚ ಮಾಡಿ ರಾಜ್ಯದ ಕೃಷ್ಣಾ, ಭದ್ರಾ, ಎತ್ತಿನಹೊಳೆ, ಮೇಕೆದಾಟು ಸೇರಿದಂತೆ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಲಾಗಿದೆ ಎಂದು ತಿಳಿಸಿದರು.

ತಾಯಿ ಕಳೆದಕೊಂಡ ನೋವಿನಲ್ಲೂ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ. ಆದರೆ, ಈ ಹಿಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 165 ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ಈ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರೂ.1.5 ಲಕ್ಶಷ ಕೋಟಿ ನೀರಾವರಿ ಯೋಜನೆಗಳಿಗೆ ವೆಚ್ಚ ಮಾಡಲಾಗುವುದು ಎಂದು ಸದನದಲ್ಲಿಯೂ ಹಾಗೂ ಹೊರಡಗೆಯೂ ಬಿಜೆಪಿ ಹೇಳಿತ್ತು. ಆದರೆ. ಬಿಜೆಪಿ ಸರ್ಕಾರ 3.5 ವರ್ಷದಲ್ಲಿ ಕೇವಲ ರೂ.45,000 ಕೋಟಿ ಮಾತ್ರ ಖರ್ಚು ಮಾಡಿದೆ. ಇನ್ನೂ ರೂ.1 ಲಕ್ಷ ಕೋಟಿ ಹಣ ಎಲ್ಲಿ ಹೋಯಿತು ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು; ಪೊಲೀಸ್ ಬಿಗಿ ಭದ್ರತೆ

ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು : ಶ್ರೀ ನಿರ್ಮಲಾನಂದ ಸ್ವಾಮೀಜಿ

About The Author