ವರುಣಾ: ಇಂದು ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿದ ಸಿದ್ದರಾಮಯ್ಯ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಟ್ಟೂರಾದ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದೆ. ಭ್ರಷ್ಟಾಚಾರ ರಹಿತವಾದ, ಪಾರದರ್ಶಕ ಆಡಳಿತ ನೀಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯವೆಂಬುದು ನಾಡಿನ ಮತದಾರರ ಅಭಿಪ್ರಾಯ. ಭವಿಷ್ಯದ ದೊಡ್ಡ ರಾಜಕೀಯ ಬದಲಾವಣೆಗೆ ವರುಣಾದಲ್ಲಿ ಮುನ್ನುಡಿ ಬರೆದಿದ್ದೇನೆ ಎಂದು ಹೇಳಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನ ನಂಜನಗೂಡಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತವಾಗಿದ್ದು ಕ್ಷೇತ್ರದ ಅಭಿವೃದ್ಧಿಗೆ ನಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದೆ.
ಭ್ರಷ್ಟಾಚಾರ ರಹಿತವಾದ, ಪಾರದರ್ಶಕ ಆಡಳಿತ ನೀಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯವೆಂಬುದು ನಾಡಿನ ಮತದಾರರ ಅಭಿಪ್ರಾಯ.ಭವಿಷ್ಯದ ದೊಡ್ಡ ರಾಜಕೀಯ ಬದಲಾವಣೆಗೆ ವರುಣಾದಲ್ಲಿ ಮುನ್ನುಡಿ ಬರೆದಿದ್ದೇನೆ. pic.twitter.com/JifoGLNHUp
— Siddaramaiah (@siddaramaiah) April 19, 2023
ಸ್ಟಾರ್ ಕ್ಯಾಂಪೇನರ್ಸ್ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್: ಶೆಟ್ಟರ್‌ಗೂ ಸಿಕ್ಕಿದೆ ಸ್ಥಾನ
‘ಗೆಲ್ತೀನಿ ಇಲ್ಲಾ ಸೋಲ್ತೀನಿ, ಆದ್ರೆ ಓಡಿ ಹೋಗೋದು ನನ್ನ ಚರಿತ್ರೆಯಲ್ಲೇ ಇಲ್ಲಾ’
ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

