ಬೆಂಗಳೂರು: ಅಮೆರಿಕದಲ್ಲಿ ಎರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು ಇವರ ಸಂಬಂಧಿಕರು ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾದರು. ಮೃತ ದೇಹಗಳನ್ನು ಇಲ್ಲಿಗೆ ತರಿಸುವುದು ಸೇರಿದಂತೆ ಹಲವು ತಾಂತ್ರಿಕ ನೆರವು ಕೋರಿದರು. ಅಗತ್ಯ ನೆರವು ಒದಗಿಸುವಂತೆ ಮುಖ್ಯಮಂತ್ರಿಗಳು ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಸೂಚಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ , ಆರ್ಥಿಕ ಇಲಾಖೆ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತಿತರ ಹಿರಿಯ ಅಧಿಕಾರಿಗಳು, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಉಪಸ್ಥಿತರಿದ್ದರು.
BJP Meeting: ಘರ್ ವಾಪಸ್ ವದಂತಿ ಬೆನ್ನಲ್ಲೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ
BJP left: ಯಾರೂ ಬಿಜೆಪಿ ತೊರೆಯುವುದಿಲ್ಲ , ನಾವೆಲ್ಲ ಒಗ್ಗಟ್ಟಾಗಿದ್ದೇವೆ: ಬಸವರಾಜ ಬೊಮ್ಮಾಯಿ
Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ