ಬೆಂಗಳೂರು: ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು.
ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ ಕೊಡುಗೆಯಿಂದ ಭಾರತವು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಬಲ ದೇಶವಾಗಿ ಬೆಳೆದಿದೆ.
Gandhi’s talisman ಎಂದು ಹೆಸರಾದ ಚಿಂತನೆಯ ನೆರಳಲ್ಲೇ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಯಾವುದೇ ಯೋಜನೆ ಜಾರಿಗೊಳಿಸುವಾಗ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಇದರಿಂದ ಅನುಕೂಲವಾಗುವುದೇ? ಸಾಮಾಜಿಕ ನ್ಯಾಯ ಪಾಲನೆಯಾಗಿದೆಯೇ? ಎಂದು ಯೋಚಿಸಿಯೇ ಮುಂದಡಿಯಿಡುವುದು ನಮ್ಮ ಆಡಳಿತದ ಅಂತಃಸತ್ವವಾಗಿದೆ.
ಬೆಲೆ ಏರಿಕೆ, ನಿರುದ್ಯೋಗ, ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ, ಭ್ರμÁ್ಟಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ನಮ್ಮ ಸರ್ಕಾರ ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ [Universal Basic income] ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ.
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆಗೂ ಮೊದಲು ನಾವು ಆಶ್ವಾಸನೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುμÁ್ಠನಕ್ಕೆ ತಾತ್ವಿಕ ಅನುಮೋದನೆ ನೀಡಿದ್ದಲ್ಲದೆ, ಸರ್ಕಾರ ಅಧಿಕಾರಕ್ಕೆ ಬಂದ ಮೂರು ವಾರಗಳಲ್ಲಿಯೇ ಗ್ಯಾರಂಟಿ ಯೋಜನೆಗಳ ಜಾರಿ ಪ್ರಾರಂಭಿಸಿ ಎಲ್ಲ ಸವಲತ್ತುಗಳನ್ನು ಜನರಿಗೆ ನೇರವಾಗಿ ತಲುಪಿಸುತ್ತಿದ್ದೇವೆ.
ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ
50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ ಪ್ರಶಂಸೆ ಮಾಡಿ ಬರೆದಿವೆ. ಶಕ್ತಿ ಯೋಜನೆ ನಮ್ಮ ಆರ್ಥಿಕ ಶಕ್ತಿಗೆ ನವ ಚೈತನ್ಯವನ್ನೇ ಉಂಟು ಮಾಡಿದೆ. ಇದುವರೆಗೆ
38.54 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.
Independence Day: ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು
Laxmi hebbakar: ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ: