Wednesday, October 15, 2025

Latest Posts

ಸಿದ್ದರಾಮಯ್ಯ ‘Champion’ ಅಲ್ಲ, ಹಿಂದುಳಿದವರ ಪಾಲಿನ ‘Cheater’

- Advertisement -

ಬಿಹಾರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವರು ‘ಬಿಹಾರ ಚುನಾವಣೆಗೆ ಫಂಡಿಂಗ್’ ಮಾಡಲು ವಸೂಲಿಗೆ ಇಳಿದಿದ್ದಾರೆ ಎಂದು ಹೇಳಿದ್ದಾರೆ.

ಅಶೋಕ ಅವರ ಆರೋಪ ಪ್ರಕಾರ, ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಿಂದ ಹಣವನ್ನು ಕಾಂಗ್ರೆಸ್ ಹೈಕಮಾಂಡಿಗೆ ಕಳುಹಿಸಬೇಕೆಂದು ಆದೇಶಿತವಾಗಿದೆ. ಅದರ ಭಾಗವಾಗಿ ಸಿದ್ದರಾಮಯ್ಯ ಸರ್ಕಾರದ ಕೆಲ ಸಚಿವರು ವಸೂಲಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಅವರು ಟ್ವೀಟ್ ಮೂಲಕ ಲೇವಡಿ ಮಾಡಿದ್ದಾರೆ.

ಒಂದು ಕಡೆ ಮೈಸೂರು ಜಿಲ್ಲೆಯನ್ನು ಸಂಪೂರ್ಣವಾಗಿ ತಮ್ಮ ಪುತ್ರನಿಗೆ ಬಿಟ್ಟುಕೊಟ್ಟು ವರ್ಗಾವಣೆ ಮತ್ತು ಕಮಿಷನ್ ದಂಧೆಯಲ್ಲಿ ತೊಡಗಿಸಿದ್ದೀರಿ. ಇನ್ನೊಂದು ಕಡೆ, ಬೆಂಗಳೂರಿನಲ್ಲಿ ‘ಡಿನ್ನರ್ ಮೀಟಿಂಗ್’ ಹಾಗೂ ‘ಕಲೆಕ್ಷನ್ ಟಾರ್ಗೆಟ್ ಮೀಟಿಂಗ್’ ಮೂಲಕ ಬಿಹಾರ ಚುನಾವಣೆಗೆ ಹಣ ಕಳುಹಿಸುವ ಸ್ಪರ್ಧೆ ನಡೆಯುತ್ತಿದೆ.

ಸಚಿವರಿಗೆ ವಸೂಲಿ ಟಾರ್ಗೆಟ್ ನೀಡಲಾಗಿದೆ. ಸಿಎಂ ಸ್ವತಃ ‘ಅಕ್ಟೋಬರ್ ಕ್ರಾಂತಿ’ಯ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಬ್ಯುಸಿಯಾಗಿದ್ದಾರೆ ಎಂದು ಟ್ವಿಟ್ ಮೂಲಕ ಅಶೋಕ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ದಲಿತರು ಮತ್ತು ಹಿಂದುಳಿದವರ ಪರವಾಗಿದ್ದೇವೆ ಎಂದು ಬೊಗಳುತ್ತೀರಿ. ಆದರೆ ನಿಮ್ಮ ಜಿಲ್ಲೆಯಲ್ಲಿ ನಡೆದ ಈ ಪಾಪದ ಘಟನೆಗೆ ಕಣ್ಣುಮುಚ್ಚಿದ್ದೀರಿ.

ಇದು ಕಾನೂನು ಸುವ್ಯವಸ್ಥೆಯ ಕುಸಿತದ ನಿದರ್ಶನ. ದಲಿತ ಬಾಲಕಿಯ ರಕ್ತ ನಿಮ್ಮ ಕೈಗಂಟಿದೆ. ನೀವು ಹಿಂದುಳಿದವರ ‘Champion’ ಅಲ್ಲ, ‘Cheater’ ಎಂದು ತೀವ್ರ ಟೀಕೆ ಮಾಡಿದ್ದಾರೆ. ಒಟ್ಟಾರೆ, ಬಿಹಾರ ಚುನಾವಣೆಗೆ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರ್. ಅಶೋಕ ಅವರ ಗಂಭೀರ ಆರೋಪ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದಿಂದ ಈ ಆರೋಪಕ್ಕೆ ಇನ್ನೂ ಪ್ರತಿಕ್ರಿಯೆ ಬಂದಿಲ್ಲ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss