- Advertisement -
www.karnatakatv.net : ಸಿಎಂ ಯಡಿಯೂರಪ್ಪ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಜನಗಳ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ, ಹಿಂದೆಯೂ ಇರಲಿಲ್ಲ, ಈಗ ಬರೋಕೂ ಸಾಧ್ಯವಿಲ್ಲ. ಹಾಗೆ 2019ರಲ್ಲಿ ಬಂದ ಪ್ರವಾಹದ ಪರಿಹಾರವನ್ನೇ ಯಡಿಯೂರಪ್ಪ ಇನ್ನೂ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ ಕೊಚ್ಚಿ ಹೋಗಿದ್ದಾರೆ, ಮನೆಗಳು ಬಿದ್ದಿವೆ ಈಗ ಸರ್ಕಾರ ಕೆಲಸ ಮಾಡೋ ಬದಲು ಸಿಎಂ ಬದಲಾವಣೆಯಲ್ಲಿದ್ದಾರೆ ಎಂದು ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.


ಈಗ ಯಡಿಯೂರಪ್ಪರನ್ನ ಚೇಂಜ್ ಮಾಡ್ತಾರೆ, ಆದ್ರೆ ಬರೋನು ಕೂಡ ಭ್ರಷ್ಟನೇ ಆಗಿರ್ತಾನೆ. ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು. ಇಲ್ಲಿ ಜನಾಭಿಪ್ರಾಯ ಬಹಳ ಮುಖ್ಯ ಎಂದು ಹೇಳಿದರು.
- Advertisement -