ಕಲ್ಬುರ್ಗಿ: ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಮನ್ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 371 ಜೆ ಗೆ ತಿದ್ದುಪಡಿಯಾಗಿ ಕಾಂಗ್ರೆಸ್ ಸರ್ಕರ ಜಾರಿ ಮಾಡಿತು. ಕಲ್ಯಾಣ ಕರ್ನಾಟಕಕ್ಕೆ 371 ಜೆ ಸೌಲಭ್ಯ ನೀಡುವಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಶ್ರೀ ಧರಂಸಿಂಗ್ ಅವರು ಪ್ರಮುಖ ಪಾತ್ರ ವಹಿಸಿದರು. ಲಾಲ್ ಕೃಷ್ಣ ಅಡ್ವಾಣಿಯವರು ದೇಶದ ಉಪಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ 371 ಜೆ ಮಾಡಲು ಇಚ್ಛಾಶಕ್ತಿ ತೋರಲಿಲ್ಲ. 371 ಜೆ ದಿಂದಾಗಿ ಈ ಭಾಗದ ಅನೇಕ ಜನರು ಸರ್ಕಾರಿ ನೌಕರಿ ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದರು.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 99,600 ಮನೆಗಳು ಸೇರಿದಂತೆ 14,42000 ಮನೆಗಳನ್ನು ನಿರ್ಮಿಸಲಾಗಿತ್ತು. ಆದರೆ ಹಿಂದಿನ ಸರ್ಕಾರ ಐದು ವರ್ಷದಲ್ಲಿ ಕೇವಲ 8 ಲಕ್ಷ ಮಾತ್ರ ಮನೆ ಮಾತ್ರ ನಿರ್ಮಾಣ ಮಾಡಿದ್ದು, ಅದರಲ್ಲಿ ಕೇವಲ 19000 ಮನೆಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಿಸಿದೆ. ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಕೇವಲ ಮರುನಾಮಕರಣ ಮಾಡಿದ್ದೇ ಹಿಂದಿನ ಸರ್ಕಾರದ ಕೊಡುಗೆ ಎಂದರು.
Kalabugri: ಗೃಹಜ್ಯೋತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ
Praladh Joshi: ರಾಜ್ಯ ಸರ್ಕಾರ ವರ್ಗಾವಣೆಗಳನ್ನು ಹರಾಜು ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ.